• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟು ವಾಹನ ಸಂಚಾರ ನಿಷೇಧಿಸುವುದು ಸರ್ಕಾರದ ಮೂರ್ಖತನ: ಸಿದ್ದರಾಮಯ್ಯ

Any Mind by Any Mind
May 9, 2021
in ಕರ್ನಾಟಕ, ರಾಜಕೀಯ
0
ಕೇಂದ್ರದಿಂದ ಆಕ್ಸಿಜನ್‌ ಪೂರೈಕೆ:   ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ -ಸಿದ್ದರಾಮಯ್ಯ
500
VIEWS
Share on WhatsAppShare on FacebookShare on Telegram

ರಾಜ್ಯಾದ್ಯಂತ ತೀವ್ರವಾಗಿ ಕರೋನ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮಾರ್ಚ್ 10 ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಹಲವಾರು ಪ್ರಶ್ನೆಗಳು ಮತ್ತು ಗೊಂದಲಗಳು ಮನೆ ಮಾಡಿದ್ದು ಇಲ್ಲಿವರೆಗೂ ಅದ್ಯಾವುದಕ್ಕು ಉತ್ತರ ಸಿಕ್ಕಿಲ್ಲದ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಸಾಮಾನ್ಯರ ಪ್ರಶ್ನೆಯನ್ನು ಸರ್ಕಾರದ ಮುಂದಿರಿಸಿದ್ದಾರೆ.

ಈ ಕುರಿತು ತಮ್ಮ ಪೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯನವರ ಬರೆಹೆ ಈ ಕೆಳಕಂಡತ್ತಿದೆ, ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ರಾಜ್ಯ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.

ಪರಿಷ್ಕೃತ ಲಾಕ್‌ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ.

ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?

ಹೊಸ‌ ಲಾಕ್‌ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ.
ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ?

ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.

ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಮುಖ್ಯಮಂತ್ರಿಗಳು ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ‌ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು ಎಂದು ಹೇಳಿದ್ದಾರೆ.

Previous Post

ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.

Next Post

ನೀವು ಯಾವ ಸಂಸ್ಕೃತಿಯ ಹರಿಕಾರರು ಸ್ವಾಮಿ..?

Next Post
ನೀವು ಯಾವ ಸಂಸ್ಕೃತಿಯ ಹರಿಕಾರರು ಸ್ವಾಮಿ..?

ನೀವು ಯಾವ ಸಂಸ್ಕೃತಿಯ ಹರಿಕಾರರು ಸ್ವಾಮಿ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

error: Content is protected !!