• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಂಎಸ್ ಪಿ , ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಗೆ ಕೇಂದ್ರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ

Any Mind by Any Mind
February 23, 2024
in Top Story, ಕರ್ನಾಟಕ
0
ಎಂಎಸ್ ಪಿ , ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಗೆ ಕೇಂದ್ರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ
Share on WhatsAppShare on FacebookShare on Telegram

ಬೆಂಗಳೂರು (Bengaluru) : ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನಿಗದಿ, ತಾರತಮ್ಯ ಮಾಡದೇ ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.‌

ADVERTISEMENT

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ (H.K.Patil) ರೈತರ ಬೆಂಬಲಕ್ಕಾಗಿ ನಿರ್ಣಯವನ್ನು ಮಂಡಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸುವ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಈ ಸದನವು ಸರ್ವಾನುಮತದಿಂದ ನಿರ್ಣಯಿಸುತ್ತದೆ ಎಂದಿದ್ದಾರೆ.‌

ರೈತರು, ಬೆಳೆಗಳ ಮೇಲಿನ MSP ಗಾಗಿ ತಮ್ಮ ಬೇಡಿಕೆಗಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಪಂಜಾಬ್ ಮತ್ತು ಹರಿಯಾಣದಿಂದ ದೆಹಲಿಯ ಕಡೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ಸಂದರ್ಭದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ. ರೈತರೊಂದಿಗೆ ಸಂಘರ್ಷಕ್ಕೆ ಆಸ್ಪದ ನೀಡದೆ ಅವರ ಅತ್ಯಂತ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಈ ಸದನ ಒತ್ತಾಯಿಸುತ್ತದೆ ಎಂದಿದ್ದಾರೆ.‌

ತಾವು ಬೆಳೆದ ಬೆಳೆಗೆ ಲಾಭದಾಯಕ ಬೆಲೆ ನಿಗದಿಯಾಗಬೇಕು ಎಂಬುದು ಪ್ರತಿಯೊಬ್ಬ ಭಾರತೀಯ ರೈತರ ಆಶಯವಾಗಿದೆ. ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರಿಕ ಸರ್ಕಾರಗಳು ಈ ಉತ್ತಮ ಆದರ್ಶವನ್ನು ಜಾರಿಗೆ ತರಲು ಮತ್ತು ಕೃಷಿಯನ್ನು ಲಾಭದಾಯಕವಾಗಿಸಲು ಒತ್ತಾಯಿಸುತ್ತವೆ ಎಂದು ಸರ್ಕಾರ ತನ್ನ ನಿರ್ಣಯದಲ್ಲಿ ತಿಳಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸುತ್ತಿರುವ ಕೃಷಿ ವಿಜ್ಞಾನಿ ಮತ್ತು ನೀತಿ ಸಲಹೆಗಾರ ದಿವಂಗತ ಡಾ.ಎಂ.ಎಸ್ ಸ್ವಾಮಿನಾಥನ್ (Dr M.S.Swaminathan) ಅವರನ್ನು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ರೈತನ ಸಾಗುವಳಿ ವೆಚ್ಚದ ಶೇ.50 ರಷ್ಟು ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಮೂಲಕ ‘ಹಸಿರು ಕ್ರಾಂತಿ’ಯನ್ನು ಸಾಧಿಸುವಲ್ಲಿ ಸರಕಾರಗಳು ನಿರೀಕ್ಷಿತ ಮಟ್ಟದಲ್ಲಿ ಯಾವುದೇ ಪ್ರಗತಿಯನ್ನೂ ಮಾಡಿಲ್ಲ, ಯಾವುದೇ ಬದಲಾವಣೆಯನ್ನೂ ತಂದಿಲ್ಲ ಎಂದು ಸ್ವಾಮಿನಾಥನ್ ವರದಿಯಲ್ಲಿ ಹೇಳಿದ್ದರು.

ಇದರ ಜೊತೆಗೆ ನಿರ್ಣಯದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು ಹಾಗೂ ವಿಶೇಷ ಅನುದಾನ ಸಮರ್ಪಕವಾಗಿ ಸಿಗದೇ ಇರುವುದನ್ನು ಖಂಡಿಸಲಾಗಿದೆ. ಈ ನಿರ್ಣಯದ ವಿಷಯವಾಗಿ ವಿಪಕ್ಷಗಳು ಗದ್ದಲ ಉಂಟು ಮಾಡಿದವು. ಕೇಂದ್ರ ಸರ್ಕಾರದ ಮೇಲೆ ಪದೇ ಪದೇ ಗೂಬೆ ಕೂರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

#Karnataka #bengaluru #session #msp #hkpatil #congress #congressgovt #stategovt #farmers

Previous Post

ರಾಜ್ಯಸಭೆ ಚುನಾವಣೆಗೆ ಲೆಕ್ಕಚಾರ ಮಾಡಿದ ಬಿಜೆಪಿ

Next Post

ನಿತ್ಯ ಬದುಕಿಗೆ ಹತ್ತಿರವಾಗುವ ಕವಿ – ಗುಲ್ಜಾರ್‌: ಸೂಕ್ಷ್ಮ ಸಂವೇದನೆಯ ಜನಪ್ರಿಯ ಕವಿಗೆ ಜ್ಞಾನಪೀಠ ದೊರೆತಿರುವುದು ಸ್ವಾಗತಾರ್ಹ

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ನಿತ್ಯ ಬದುಕಿಗೆ ಹತ್ತಿರವಾಗುವ ಕವಿ – ಗುಲ್ಜಾರ್‌: ಸೂಕ್ಷ್ಮ ಸಂವೇದನೆಯ ಜನಪ್ರಿಯ ಕವಿಗೆ ಜ್ಞಾನಪೀಠ ದೊರೆತಿರುವುದು ಸ್ವಾಗತಾರ್ಹ

ನಿತ್ಯ ಬದುಕಿಗೆ ಹತ್ತಿರವಾಗುವ ಕವಿ – ಗುಲ್ಜಾರ್‌: ಸೂಕ್ಷ್ಮ ಸಂವೇದನೆಯ ಜನಪ್ರಿಯ ಕವಿಗೆ ಜ್ಞಾನಪೀಠ ದೊರೆತಿರುವುದು ಸ್ವಾಗತಾರ್ಹ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!