• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?

ಕೃಷ್ಣ ಮಣಿ by ಕೃಷ್ಣ ಮಣಿ
August 15, 2024
in Top Story, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಗ್ಯಾರಂಟಿಗಳನ್ನು ಕೊಡ್ತೀವಿ ಎಂದು ಘೋಷಣೆ ಮಾಡಿದ್ದಕ್ಕೇ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಬರೋಬ್ಬರಿ 136 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಅಧಿಕಾರದ ಗದ್ದುಗೆಗೆ ಏರಿದ ಬಳಿಕ ಕಾಂಗ್ರೆಸ್‌ ಕೂಡ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿತ್ತು. ಒಂದೊಂದಾಗಿ ಯೋಜನೆ ಜಾರಿ ಮಾಡುವ ಮೂಲಕ ನುಡಿದಂತೆ ನಡೆದ ಸರ್ಕಾರ ಅನ್ನೋ ಬಿರುದಾಂಕಿತವನ್ನೂ ಸಿದ್ದರಾಮಯ್ಯ ಹೇಳಿಕೊಂಡ್ರು. ಆದರೆ ಇದೀಗ ಕಳೆದ ಎರಡ್ಮೂರು ತಿಂಗಳಿಂದ ಮಹಿಳೆಯರಿಗೆ ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎನ್ನುವ ಕೂಗು ಎದ್ದಿತ್ತು. ನಾಲ್ಕೈದು ದಿನಗಳ ಹಿಂದೆ ಒಂದು ತಿಂಗಳ ಹಣ ಬಂದಿತ್ತು. ಇನ್ನೂ ಒಂದು ತಿಂಗಳ ಹಣ ಬ್ಯಾಲೆನ್ಸ್‌ ಇದೆ. ಈ ನಡುವೆ ಸಣ್ಣದೊಂದು ಗೊಂದಲ ಸೃಷ್ಟಿಯಾಗಿದೆ.

ADVERTISEMENT

ಆಗಸ್ಟ್‌ ತಿಂಗಳಿಂದಲೇ ಗ್ಯಾರಂಟಿಯ ಗೃಹಲಕ್ಷ್ಮೀ ಜಾರಿ ಮಾಡಿದ್ದ ಕಾಂಗ್ರೆಸ್‌ ಸರ್ಕಾರ ವರ್ಷ ತುಂಬುವ ಮೊದಲೇ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಆಗಬೇಕು ಅಂತ ಸಚಿವರುಗಳೇ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಈಗಾಗಲೇ ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದು, ಸರ್ಕಾರದ ಯೋಜನೆಗಳು ಬಡವರಿಗಷ್ಟೇ ಸಿಗಬೇಕು. ಶ್ರೀಮಂತರಿಗೆ ಕೊಡಬೇಕಿಲ್ಲ ಎಂದು ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಭಾಗಿಯಾಗಿರುವ ಸಚಿವರುಗಳೇ ಈ ರೀತಿ ಹೇಳುತ್ತಿರುವುದು ಗ್ಯಾರಂಟಿ ಗೊಂದಲ ಹುಟ್ಟುಹಾಕಿದೆ. ಶ್ರೀಮಂತರು ಬಡವರು ಅನ್ನೋ ಆಧಾರದಲ್ಲಿ ಕೆಲವರನ್ನು ಕೈಬಿಡಲಾಗುತ್ತದೆ ಎನ್ನುವ ಸಣ್ಣದೊಂದು ಗುಸುಗುಸು ಶುರುವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಗ್ಯಾರಂಟಿ ಯೋಜನೆಗಳು ಕೈಹಿಡಿದಿಲ್ಲ ಎಂದು ಈ ಮೊದಲು ಕಾಂಗ್ರೆಸ್‌ ಶಾಸಕರು ಅಪಸ್ವರ ಎತ್ತಿದ್ದರು. ಆದರೆ ಸೋಲಿನ ಬೆನ್ನಲ್ಲೇ ಯೋಜನೆ ರದ್ದು ಮಾಡಿದ್ರೆ ಕಾಂಗ್ರೆಸ್‌ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಅನ್ನೋ ಕಾರಣಕ್ಕೆ ತಾತ್ಕಾಲಿಕವಾಗಿ ತಡೆಯಿಡಿಯಲಾಗಿತ್ತು. ಆದರೀಗ ಎಲ್ಲವೂ ಒಂದು ಹಂತಕ್ಕೆ ತಲುಪಿದ್ದು, ಸರ್ಕಾರ ಒಂದು ನಿರ್ಧಾರ ಮಾಡಲೇಬೇಕು ಅನ್ನೋ ಚರ್ಚೆಗಳು ಶುರುವಾಗಿವೆ. ಈ ವಿಚಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟವಾಗಿ ಮಾಹಿತಿ ನೀಡಿದ್ದು, ಗ್ಯಾರಂಟಿಗಳು ಶ್ರೀಮಂತರಿಗೆ ಹೋಗೋದನ್ನು ತಡೆಯಬೇಕು ಎಂದು ಹೈಕಮಾಂಡ್‌ಗೂ ಮಾಹಿತಿ ನೀಡಿದ್ದೇವೆ. ಆದರೆ ಗ್ಯಾರಂಟಿ ಯೋಜನೆಯನ್ನೇ ನಿಲ್ಲಿಸೋದಿಲ್ಲ. ಜನರು ಹೇಳುವ ಮಾತುಗಳನ್ನೇ ನಾಯಕರ ಗಮನಕ್ಕೆ ತಂದಿದ್ದೇವೆ ಎಂದಿದ್ದಾರೆ.

ಒಂದು ಕಡೆ ಶ್ರೀಮಂತರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಬಾರದು ಅನ್ನೋ ಬಗ್ಗೆ ಗಟ್ಟಿ ದನಿಯಲ್ಲಿ ಹೇಳುವಾಗಲೇ ಮತ್ತೊಂದು ಕಡೆ ಗ್ಯಾರಂಟಿ ಬಗ್ಗೆ ಭಿನ್ನ ವಿಭಿನ್ನ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಬಡವರಿಗೆ ಸಿಗಬೇಕು ನಿಲ್ಲಿಸಲ್ಲ ಎಂದಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಗ್ಯಾರಂಟಿ ಯೋಜನೆ ಮಿಸ್ ಯೂಸ್​ ಆಗ್ತಿದ್ದರೆ ಕ್ರಮ ಅಗತ್ಯ ಎನ್ನುವ ಮೂಲಕ ತಡೆಯುವ ಮಾತನ್ನಾಡಿದ್ದಾರೆ. ಗ್ಯಾರಂಟಿ ನಿಲ್ಲಿಸಲ್ಲ, ವಿಪಕ್ಷಗಳಿಗೆ ಹೊಟ್ಟೆಕಿಚ್ಚು ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಮಾತ್ರ ಸರ್ಕಾರ ಕೊಟ್ಟಿದ್ದ ಭರವಸೆಗಳು ಹಳ್ಳ ಹಿಡಿಯುತ್ತಿವೆ ಎನ್ನುವ ಮೂಲಕ ಸರ್ಕಾರದ ಮೇಲೆ ಮುಗಿಬೀಳಲು ಸಿದ್ಧವಾಗಿದ್ದೇವೆ ಎನ್ನುವ ಸುಳಿವು ಕೊಟ್ಟಿದ್ದಾರೆ. ಆದರೆ ಗ್ಯಾರಂಟಿ ಗೊಂದಲವನ್ನು ಸರ್ಕಾರವೇ ಹುಟ್ಟು ಹಾಕಿದೆ. ಈಗಾಗಲೇ ಹಣ ಬಾರದೆ ಗೃಹಿಣಿಯರು ಆಕ್ರೋಶಗೊಂಡಿದ್ದಾರೆ. ಸರ್ಕಾರವೇ ಈ ಬಗ್ಗೆ ಸ್ಪಷ್ಟನೆ ಕೊಡಬೇಕಿದೆ.

ಕೃಷ್ಣಮಣಿ

Tags: BJPcongress cm seatcongress electioncongress karnataka newsCongress NewsCongress Partycongress win 2023 electioncongress win in karnatakacongress win reactiondcm karnatakaDK ShivakumarKarnataka Congresskarnataka dcmkarnataka pollskarnataka resultssiddaramaiahsiddaramaiah newswhat is dcmwho is dcmwho will be the next cm of karnatakaಎಚ್ ಡಿ ಕುಮಾರಸ್ವಾಮಿಕರ್ನಾಟಕಕಾಂಗ್ರೆಸ್‌ ಸರ್ಕಾರಗ್ಯಾರಂಟಿ ಯೋಜನೆನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವ್ಯಕ್ತಿಯ ಜಮೀನಿಗೆ ಪರಿಹಾರ ನೀಡದಿದ್ದಕ್ಕೆ ಮಹಾರಾಷ್ಟ್ರದ ಉಚಿತ ಯೋಜನೆಗೆ ತಡೆ ನೀಡುವ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

Next Post

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಾದಕ್ಕೆ ಕಾರಣವಾದ ರಾಹುಲ್ ಗಾಂಧಿ ಆಸನ ವ್ಯವಸ್ಥೆ; ಸರಕಾರ ಹೇಳಿದ್ದೇನು?

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಾದಕ್ಕೆ ಕಾರಣವಾದ ರಾಹುಲ್ ಗಾಂಧಿ ಆಸನ ವ್ಯವಸ್ಥೆ; ಸರಕಾರ ಹೇಳಿದ್ದೇನು?

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!