• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

ಎಂಎಸ್‌ಎಂಇ ವಲಯ ಸಮಗ್ರ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೀತಿಯನ್ನು ರೂಪಿಸುವ ಉದ್ದೇಶವನ್ನು ನಮ್ಮ ಇಲಾಖೆ ಹೊಂದಿದೆ : ಸಿಂಧೂರಿ..

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in Top Story, ಇದೀಗ, ಕರ್ನಾಟಕ
0
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಎಂಎಸ್‌ಎಂಇ ( Micro, Small & Medium Enterprises) ಸಕ್ಕರೆ ಹಾಗೂ ಜವಳಿ ಇಲಾಖೆ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ADVERTISEMENT
Budget Session: ಸರ್ವರ್ ಸಮಸ್ಯೆ ಬಗೆಹರಿಸಲು ಯೋಗ್ಯತೆ ಇಲ್ಲ ಎಂದ ಸುನಿಲ್ ಕುಮಾರ್​​ಗೆ ಸಿದ್ರಾಮಯ್ಯ ಕ್ಲಾಸ್

ಇಂದು ಕಾಸಿಯಾ ಭವನದಲ್ಲಿ ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರಕ್ಕೆ ಚಾಲನೆ ನೀಡಿ, ರಾಜ್ಯದ ಒಟ್ಟು ಕೈಗಾರಿಕಾ ಘಟಕಗಳ ಪೈಕಿ ಶೇ.97 ರಷ್ಟು ಎಂಎಸ್‌ಎಂಇಗಳಿವೆ. ರಾಜ್ಯದಲ್ಲಿ ಅತಿಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಿರುವ ಕ್ಷೇತ್ರ ಇವುಗಳದ್ದಾಗಿದೆ. ನಮ್ಮ ಸರ್ಕಾರ ಇವುಗಳ ಮಹತ್ವವನ್ನು ಅರಿತು ಪ್ರತ್ಯೇಕ ನೀತಿಯನ್ನು ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಹೇಳಿದ್ದಾರೆ.

ಇದರ ಮೊದಲ ಹಂತವಾಗಿ ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ವಿಭಾಗೀಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗುವುದು. ಈ ಮೂಲಕ ಎಂಎಸ್‌ಎಂಇ ವಲಯ ಸಮಗ್ರ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೀತಿಯನ್ನು ರೂಪಿಸುವ ಉದ್ದೇಶವನ್ನು ನಮ್ಮ ಇಲಾಖೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ನೀತಿ, ತಂತ್ರಜ್ಞಾನವನ್ನು ಕೇಂದ್ರಬಿಂದುವನ್ನಾಗಿಸಿಕೊಂಡು ಜಾಗತಿಕ ಮಟ್ಟದಲ್ಲಿ ರಾಜ್ಯವನ್ನು ಮುಂಚೂಣಿಯಲ್ಲಿ ತಂದು ನಿಲ್ಲಿಸಲಿದೆ. ಈ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ರಾಜ್ಯ ಸರ್ಕಾರ ಈ ನೀತಿಯನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯದ ಕೈಗಾರಿಕೆಗಳ ಬೆನ್ನೆಲುಬಾಗಿರುವಂತಹ ಎಂಎಸ್‌ಎಂಇ ಗಳ ಅಭಿವೃದ್ದಿಗೆ ಅನುವು ಮಾಡಿಕೊಡಲಿದೆ. ಈ ನೀತಿಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಉದ್ಯಮಿಗಳ ಸಲಹೆಗಳ ಅಗತ್ಯವಿದೆ. ನಮ್ಮ ಇಲಾಖೆ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಲಿದೆ. ಉದ್ಯಮಿಗಳೂ ಹಾಗೂ ಉದ್ಯಮ ಸಂಸ್ಥೆಗಳು ಉತ್ತಮ ನೀತಿಯನ್ನು ಹೊರತರುವಲ್ಲಿ ಅಗತ್ಯ ಸಹಕಾರ ನೀಡಲಿ ಎಂದು ಕರೆ ನೀಡಿದ್ದಾರೆ.

ಕಾರ್ಯಾಗಾರದಲ್ಲಿ ಕಾಸಿಯಾ ಅಧ್ಯಕ್ಷ ಬಿ.ಆರ್‌ ಗಣೇಶ್‌ ರಾವ್‌, ಎಂಎಸ್‌ಎಂಇ ಇಲಾಖೆ ನಿರ್ದೇಶಕರಾದ ಡಾ ಸತೀಶ ಬಿ.ಸಿ, ಪೀಣ್ಯ ಕೈಗಾರಿಕಾ ಪ್ರದೇಶದ ಅಧ್ಯಕ್ಷ ಡಿ.ಪಿ ದಾನಪ್ಪ, ಅವೇಕ್‌ ಅಧ್ಯಕ್ಷೆ ಭುವನೇಶ್ವರಿ ಸೇರಿದಂತೆ ನೂರಾರು ಉದ್ಯಮಿಗಳೂ ಪಾಲ್ಗೊಂಡಿದ್ದರು.

Tags: AIartificial intelligenceBussinessmansDepartment Of MSMEDigital technologyEntrepreneurshipGovernment of IndiaIAS Rohini Sindhuri..Karnataka GovernmentKASSIAMedium IndustryMSMEPratidhvaniSmall Industry
Previous Post

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

Next Post

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada