• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸಾರಿಗೆ ನಿಗಮದಿಂದ ಕೇಂದ್ರ ಸರ್ಕಾರ ಹೆಚ್ಚುವರಿ ಹಣ ವಸೂಲಿ : ಸಿದ್ದರಾಮಯ್ಯ ಕಿಡಿ

Any Mind by Any Mind
July 1, 2022
in ಕರ್ನಾಟಕ
0
ಬಿಜೆಪಿಯ ನಾಯಕರೇ ನಿಜವಾದ ತುಕ್ಡೆ ಗ್ಯಾಂಗ್‌ : ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ, ಇಡೀ ದೇಶದಲ್ಲಿಯೆ ಅತ್ಯುತ್ತಮ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನುಳ್ಳ ರಾಜ್ಯ ಕರ್ನಾಟಕವಾಗಿತ್ತು. 2013 -18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೆ ಹಲವು ಬಾರಿ ಪ್ರಶಸ್ತಿಗಳನ್ನು ನೀಡಿತ್ತು. ಸುವ್ಯವಸ್ಥೆಯಲ್ಲಿದ್ದ ರಾಜ್ಯದ ಸಾರಿಗೆ ವ್ಯವಸ್ಥೆಗೆ ಬಿಜೆಪಿ ಸರ್ಕಾರ ನಿಧಾನ ವಿಷ ಕೊಟ್ಟು ಕೊಲ್ಲುತ್ತಿದೆ.

ರಾಜ್ಯದ ಕೆಎಸ್‍ಆರ್‍ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ. ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 130000[ 1.3 ಲಕ್ಷ] ನೌಕರರಿಗೆ ಸರ್ಕಾರದ ನಾಲ್ಕೂ ಸಾರಿಗೆ ನಿಗಮಗಳು ಉದ್ಯೋಗ ನೀಡಿವೆ. ಪ್ರತಿ ದಿನ ಸುಮಾರು 20-25 ಕೋಟಿ ರೂಗಳ ಆದಾಯವಿದೆ. ಇಷ್ಟಿದ್ದರೂ ಬಿಜೆಪಿ ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾಗಿದೆ.

ನರೇಂದ್ರ ಮೋದಿಯವರ ಸರ್ಕಾರ ಈ ನಿಗಮಗಳು ಖರೀದಿಸುವ ಪ್ರತಿ ಲೀಟರ್ ಡೀಸೆಲ್ ಮೇಲೆ ಖಾಸಗಿಯವರಿಗಿಂತ 25 ರೂಪಾಯಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿದೆ. ಬಲ್ಕ್ ಆಗಿ ಖರೀದಿಸುವವರು ಪ್ರತಿ ಲೀಟರ್ ಮೇಲೆ 25 ರೂಗಳನ್ನು ಹೆಚ್ಚು ಪಾವತಿಸಬೇಕು ಎಂಬ ನಿಯಮದಿಂದಾಗಿ ಈ ಸಮಸ್ಯೆ ಬಂದೊದಗಿದೆ. ಖಾಸಗಿಯವರಿಗೆ ಪ್ರತಿ ಲೀಟರ್ ಡೀಸೆಲ್ 88 ರೂಪಾಯಿಗೆ ಲಭಿಸಿದರೆ, ಸರ್ಕಾರದ ನಿಗಮಗಳು 113 ರೂ ಪಾವತಿಸಬೇಕಾಗಿದೆ. ಇದು ಮೋದಿಯವರ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಸಾರಿಗೆಗೆ ಮಾಡುತ್ತಿರುವ ಕ್ಷಮಿಸಲಾಗದ ದ್ರೋಹ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳು ಪ್ರತಿ ದಿನ ಸುಮಾರು 13 ಲಕ್ಷ ಲೀಟರ್ ಡೀಸೆಲ್ ಬಳಸುತ್ತವೆ ಲೀಟರ್ ಮೇಲೆ 25 ರೂ ಹೆಚ್ಚಿಗೆ ಪಾವತಿಸಬೇಕಾಗಿರುವುದರಿಂದ ಪ್ರತಿ ದಿನ 3.25 ಕೋಟಿ ರೂಪಾಯಿಗಳನ್ನು, ವರ್ಷಕ್ಕೆ 1187 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗಿದೆ.

ಬಿಜೆಪಿ ಸರ್ಕಾರದ ಈ ನೀತಿಯಿಂದಾಗಿ ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯು ವಿಪರೀತ ಸಂಕಷ್ಟಕ್ಕೆ ಸಿಲುಕಿಕೊಂಡಿದೆ.

ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ. ಈ ನೌಕರರು ರಾಜ್ಯದ ಇತರೆ ಸರ್ಕಾರಿ ನೌಕರರು ಪಡೆಯುತ್ತಿರುವ ವೇತನಗಳಿಗಿಂತ ಶೇ.40 ರಷ್ಟು ಕಡಿಮೆ ಪಡೆಯುತ್ತಿದ್ದಾರೆ. ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸುತ್ತಿದ್ದಾರೆ. ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ.

ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ ಸರ್ಕಾರ ಉಸಿರುಬಿಡುತ್ತಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಈಗಾಗಲೆ ಬೆಂಗಳೂರಿನ ಬಿಜೆಪಿಯ ಎಡಬಿಡಂಗಿ ಮನಸ್ಥಿತಿಯ ಸಂಸದರೊಬ್ಬರು ಸಾರಿಗೆ ವ್ಯವಸ್ಥೆಯನ್ನು ಖಾಸಗಿಯರಿಗೆ ಒಪ್ಪಿಸಬೇಕು ಎಂದು ಹೇಳಿದ್ದರು.

ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ ಮೋದಿ ಮತ್ತು ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ. ಜನಪರವಾಗಿ ಯೋಚಿಸುವವರು, ಸಾಮಾನ್ಯ ತಿಳುವಳಿಕೆ ಇರುವವರು ಮಾಡುವ ಕೆಲಸವೆ ಇದು?
ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣವಾಗಿ ತೆರಿಗೆ ವಿನಾಯಿತಿ ನೀಡಬೇಕು.

ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಹಾಗೂ ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಆಗ್ರಹಿಸುತ್ತೇನೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

Next Post

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!