• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
November 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ‌ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನ ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಆ ಬಳಿಕ ಕಂಪನಿಯವರು ಹೈ ಕೋರ್ಟ್ ನಿಂದ ಆದೇಶ ಪಡೆದ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬರೋಟರಿಯಲ್ಲಿ ಟೆಸ್ಟಿಂಗ್ ನಡೆದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂತು.

ಸಿ.ಡಿ.ಎಲ್ ನವರ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಟೆಸ್ಟಿಂಗ್ ನಡೆಸಿ ಸ್ಟ್ಯಾಂಡರ್ಡ್ ಕ್ವಾಲಿಟಿಯ ಕೆಲವು ಬ್ಯಾಚ್ ಗಳ ದ್ರಾವಣವನ್ನ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ.‌

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನ ಅನರೋಬಿಕ್ ಟೆಸ್ಟ್ ಗೆ ಕಳಿಸಿದ್ದೇವೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೂ ಒಂದು ಕಾರಣವಾಗಿರಬಹುದಾ ಅಥವಾ ಇಲ್ಲಾವಾ ಎಂಬುದು ಅನರೋಬಿಕ್ ಟೆಸ್ಟ್ ನಲ್ಲಿ ಸ್ಪಷ್ಟತೆ ಸಿಗಲಿದೆ.‌ವಾರದಲ್ಲಿ ಈ ಟೆಸ್ಟಿಂಗ್ ವರದಿ ಬರಲಿದೆ.ಆ ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಅಲ್ಲಿಯ ವರೆಗೆ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ.ನಮಗೆ ಪ್ರತಿಯೊಂದು ಜೀವವು ಮುಖ್ಯ. ಈ ರೀತಿಯ ಅನುಮಾನಗಳು ವ್ಯಕ್ತವಾದಾಗ ಮುನ್ನೆಚ್ಚೆರಿಕೆ ವಹಿಸಬೇಕಾಗುತ್ತದೆ.ಈ ಹಿನ್ನೆಲೆಯಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಸದಂತೆ ಎಲ್ಲ‌ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

Tags: Bellary District HospitalCDL's reportHealth Minister Dinesh GunduraoIV Ringer lactateprecautionary measuresuspended across
Previous Post

ಬಳ್ಳಾರಿಯ ಬಾಣಂತಿಯರ ಸರಣಿ ಸಾವು.. ಮಹತ್ವದ ಸಭೆ ಕರೆದ ಸಿಎಂ..

Next Post

ವಾರದ ಪಂಚಾಯ್ತಿಯಲ್ಲಿ,ಕಿಚ್ಚನ ಕ್ಲಾಸ್ ಯಾರಿಗೆ? ಮಂಜು – ಮೋಕ್ಷಿತಾ ಜಗಳದಲ್ಲಿ ಯಾರದ್ದು ಸರಿ?

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ವಾರದ ಪಂಚಾಯ್ತಿಯಲ್ಲಿ,ಕಿಚ್ಚನ ಕ್ಲಾಸ್ ಯಾರಿಗೆ? ಮಂಜು – ಮೋಕ್ಷಿತಾ ಜಗಳದಲ್ಲಿ ಯಾರದ್ದು ಸರಿ?

ವಾರದ ಪಂಚಾಯ್ತಿಯಲ್ಲಿ,ಕಿಚ್ಚನ ಕ್ಲಾಸ್ ಯಾರಿಗೆ? ಮಂಜು - ಮೋಕ್ಷಿತಾ ಜಗಳದಲ್ಲಿ ಯಾರದ್ದು ಸರಿ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada