ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದ್ದು, , ವಿದ್ಯಾರ್ಥಿಗಳಿಗೆ ಕೆಲ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
- ಪರೀಕ್ಷೆಯಲ್ಲಿ ಯಾವುದೇ ರೀತಿಯ ಕಾಪಿ ಮಾಡುವುದು ಮತ್ತು ಕಾಪಿ ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ವಿನಿಮಯ ಮಾಡುವುದು ನಿಷೇಧ ಮಾಡಲಾಗಿದೆ
- ಪರೀಕ್ಷೆಯ ಸಂದರ್ಭ ವಸ್ತುಗಳ ವಿನಿಮಯ ಸೇರಿದ ಹಾಗೆ ಇನ್ನಿತರ ಚಟುವಟಿಕೆಗಳಿಗೆ ನಿಷೇಧ.
- ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದನ್ನು ತಡೆಹಿಡಿಯಲಾಗಿದೆ
- ಪರೀಕ್ಷೆ ಕೇಂದ್ರದೊಳಗೆ ಅಪರಿಚಿತ ಮತ್ತು ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಜೊತೆಗೆ ಪರೀಕ್ಷೆ ಕೇಂದ್ರದೊಳಗೆ ಚಿತ್ರಿಕರಣಕ್ಕೆ ಅವಕಾಶವಿಲ್ಲ
- ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ ನಿಷೇಧಿತ ವಲಯದಲ್ಲಿ ಸ್ಫೋಟಕ ವಸ್ತುಗಳು ಮತ್ತು ಮಾರಕ ವಸ್ತುಗಳನ್ನು ಕೊಂಡೊಯ್ಯುವುದು ತಡೆಹಿಡಿಯಲಾಗಿದೆ
- ಪರೀಕ್ಷಾ ಕೇಂದ್ರದ ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸುವುದು ಮತ್ತು ಮಾಹಿತಿಯನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಸಂಪೂರ್ಣವಾಗಿ ನಿಷೇಧಿಸಿದೆ.
7.ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಣೆಗೆ ತಡೆಹಿಡಿಯಲಾಗಿದೆ

ಇನ್ನು,ಈ ಮಾರ್ಗಸೂಚಿಗಳ ಜೊತೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ ಸಂಸ್ಥೆಯ ಸಾಮಾನ್ಯ ಸೇವೆಯ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದೆ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರದ ಕಡೆಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಟಿಸಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು ಮೇ 23 ರಿಂದ ಜೂನ್ 3 ರವರೆಗೆ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಾಮಾನ್ಯ ಸೇವೆಯಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ ಇದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಬಹುದಾಗಿದೆ ಅಂತ ತಿಳಿಸಿದೆ. ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ
23-05-2023, ಮಂಗಳವಾರ – ಕನ್ನಡ, ಅರೇಬಿಕ್
24-05-2023, ಬುಧವಾರ ಲ- ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
25-05-2023, ಗುರುವಾರ – ಇಂಗ್ಲೀಷ್
26-05-2023, ಶುಕ್ರವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
27-05-2023, ಶನಿವಾರ – ಇತಿಹಾಸ, ಸಂಖ್ಯಾಶಾಸ್ತ್ರ
29-05-2023, ಸೋಮವಾರ – ಹಿಂದಿ
30-05-2023, ಮಂಗಳವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
31-05-2023, ಬುಧವಾರ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
01-06-2023, ಗುರುವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
02-06-2023, ಶುಕ್ರವಾರ – ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
03-06-2023, ಶನಿವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ