ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಅಕ್ರಮವಾಗಿ ಹೂತಿದ್ದಾರೆ ಎಂಬ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ FIR ರದ್ದು ಮಾಡಬೇಕೆಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ , ವಿಠಲ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಮೊಹಮ್ಮದ್ ನವಾಜ್ ಏಕಸದಸ್ಯ ಪೀಠ ಅ.30ರಂದು ತನಿಖೆಗೆ ತಡೆಯಾಜ್ಞೆ ನೀಡಿತ್ತು.

ಅರ್ಜಿ ಬಗ್ಗೆ ಇಂದು ಮತ್ತೆ ವಿಚಾರಣೆ ನಡೆದಾಗ SIT ಪರ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆ. ಹೀಗಾಗಿ FIR ರದ್ದು ಮಾಡಬಾರದೆಂದು ವಾದ ಮಂಡಿಸಿದ್ದರು.
ವಾದ ಆಲಿಸಿದ ಹೈಕೋರ್ಟ್, ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ. ಹಾಗೆ ಆರೋಪಿಗಳಿಗೆ ಕಿರುಕುಳ ನೀಡಬಾರದೆಂಬ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.












