ಬೆಂಗಳೂರು : ಸ್ಟಿಂಗ್ ಆಪರೇಷನ್ (Sting Operation) ಪ್ರಕರಣ ಸಂಬಂಧ ಕೃಪಾ ಆಳ್ವಾ (Krupa Alva) ಅವರು ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಸೈಬರ್ ಕ್ರೈಂ ಪೊಲೀಸರು ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ಅವರು ತಮ್ಮ ವಾಹನದಲ್ಲಿ ಬೆಂಗಳೂರಿನ ಸಿಸಿಬಿ ಕಚೇರಿಗೆ ಆಗಮಿಸಿ, ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ಮಾಧ್ಯಮದವರ ಪ್ರಶ್ನೆಗಳಿಗೆ ತಕ್ಷಣ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಸದ್ಯಕ್ಕೆ ಅಧಿಕೃತ ಪ್ರಕ್ರಿಯೆ ಹಾಗೂ ವಿಚಾರಣೆ ಮುಗಿಸಿಕೊಂಡು ಹೊರಬಂದ ನಂತರವೇ ಈ ಕುರಿತು ವಿವರವಾಗಿ ಮಾತನಾಡುವುದಾಗಿ ತಿಳಿಸಿ ನೇರವಾಗಿ ಸೈಬರ್ ಕ್ರೈಂ ಠಾಣೆಯೊಳಗೆ ತೆರಳಿದರು.
ಸೈಬರ್ ಕ್ರೈಂ ವಿಭಾಗದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೃಪಾ ಆಳ್ವಾ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಜರಾಗಿರುವ ಅವರ ವಿಚಾರಣೆ ಪ್ರಕ್ರಿಯೆಯನ್ನು ಅಧಿಕಾರಿಗಳು ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
ಅಮೆರಿಕದಲ್ಲಿ ದೀಪಾವಳಿ ಕಾರ್ಯಕ್ರಮಕ್ಕೆ ಬಲಪಂಥೀಯರ ಅಡ್ಡಿ: ದ್ವೇಷದ ರಾಜಕಾರಣಕ್ಕೆ ಗಡಿಗಳಿಲ್ಲ!






