ತುಮಕೂರು : ಕಾಂಗ್ರೆಸ್ ಹಿರಿಯ ನಾಯಕ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲು ಕೊರಟಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ್ದ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆಯು ವರದಿಯಾಗಿದೆ.

ಕಲ್ಲು ತೂರಾಟದ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜಿ. ಪರಮೇಶ್ವರ್, ನಾನು ನಾಮಪತ್ರ ಸಲ್ಲಿಸಲೆಂದು ಕಚೇರಿಯ ಒಳಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಯಾರು ಅನ್ನೋದ್ರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದು ಅವರಿಂದ ನಾನು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.