ಮಂಡ್ಯದ (Mandya) ಮದ್ದೂರಿನಲ್ಲಿ ನಿನ್ನೆ (ಸೆ.7) ಗಣೇಶ ಮೆರವಣಿಗೆ (Ganesha procession) ವೇಳೆ ಕಲ್ಲು ತೂರಾಟ ನಡೆದಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಂಡ್ಯ ಮದ್ದೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಕ್ಷಣ ಕ್ಷಣಕ್ಕೂ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಠಾಣೆ ರಸ್ತೆಗೆ ಬ್ಯಾರಿಕೇಡ್ ಹಾಕಿ ಭದ್ರತೆ ಕೈಗೊಳ್ಳಲಾಗಿದೆ. ಇದ್ರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಾತಪಡಿಸಿದ್ದಾರೆ. ಏಕಾಏಕಿ ಸಾವಿರಾರು ಸಂಖ್ಯೆಯಲ್ಲಿ ನುಗ್ಗಿದ ಕಾರ್ಯಕರ್ತರ ಆಕ್ರೋಶ ಸ್ಫೋಟಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಆಗಮಿಸಿದ್ದು, ಮೈಸೂರು ಎಸ್ಪಿ ವಿಷ್ಣುವರ್ಧನ್ ಸೇರಿ ಹಲವರು ಉಪಸ್ಥಿತರಿದ್ದಾರೆ. ಇನ್ನು ಸ್ಥಳಕ್ಕೆ ಮೈಸೂರು, ಹಾಸನ ಹಾಗೂ ಚಾಮರಾಜನಗರದಿಂದ ಪೊಲೀಸ್ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ.











