ಶಿವಮೊಗ್ಗ : ಮಾ.27: ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ.


ಒಳ ಮೀಸಲಾತಿ ಕುರಿತಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ಕುರಿತಾಗಿ ಬಂಜಾರ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿ, ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಎಸ್ ವೈ ನಿವಾಸರ ಬಳಿ ಅಳವಡಿಸಲಾಗಿದ್ದ ಫ್ಲೆಕ್ಸ್ಗಲನ್ನು ಕಿತ್ತೊಗೆದು ಬ್ಯಾರಿಕೇಡ್ ಗಳನ್ನ ತಳ್ಳಿ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ ಸ್ಥಳದಲ್ಲಿದ್ದ ಪೊಲೀಸರು ಇದನ್ನ ತಡೆದಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಡಿಯೂರಪ್ಪ ನಿವಾಸ ಹಾಗೂ ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಬಸ್ತ್ ಕಲ್ಪಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.