ನಾಗ್ಪುರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ (ಎಸ್ಪಿ) ನಾಯಕ ಅನಿಲ್ ದೇಶ್ಮುಖ್ ಅವರ ಕಾರಿನ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಟೋಲ್ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಟೋಲ್ ಬಳಿಯ ಜಲಖೇಡ ರಸ್ತೆಯ ಬೆಲ್ಫಟಾ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ದೇಶಮುಖ ಅವರ ಕಾರಿಗೆ ಕಲ್ಲು ಎಸೆದಿದ್ದಾರೆ.
ದಾಳಿಯ ವೇಳೆ ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಕಟೋಲ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೊದ್ದಾರ್ ಘಟನೆಯನ್ನು ಖಚಿತಪಡಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದರು. “ತನಿಖೆ ಆರಂಭವಾಗಿದೆ. ಪೊಲೀಸರು ದಾಳಿಗೆ ಕಾರಣರಾದವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದರು.
ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಈ ಘಟನೆ ಸಂಭವಿಸಿದೆ. ದೇಶಮುಖ್ ಅವರ ಪುತ್ರ ಸಲೀಲ್ ದೇಶಮುಖ್ ಅವರು ಬಿಜೆಪಿಯ ಚರಣಸಿಂಗ್ ಠಾಕೂರ್ ವಿರುದ್ಧ ಎನ್ಸಿಪಿ (ಶರದ್ಚಂದ್ರ ಪವಾರ್) ಟಿಕೆಟ್ನಲ್ಲಿ ಕಟೋಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.