• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಬಸ್​ ನಿಲ್ಲಿಸಿ ಮಾರ್ಗ ಮಧ್ಯೆ ನಮಾಜ್​.. ಶಿಸ್ತು ಕ್ರಮಕ್ಕೆ ಸೂಚನೆ

ಕೃಷ್ಣ ಮಣಿ by ಕೃಷ್ಣ ಮಣಿ
May 1, 2025
in Top Story, ಇದೀಗ, ದೇಶ, ರಾಜಕೀಯ
0
ಸರ್ಕಾರಿ ಬಸ್​ ನಿಲ್ಲಿಸಿ ಮಾರ್ಗ ಮಧ್ಯೆ ನಮಾಜ್​.. ಶಿಸ್ತು ಕ್ರಮಕ್ಕೆ ಸೂಚನೆ
Share on WhatsAppShare on FacebookShare on Telegram

ಮಾರ್ಗ ಮಧ್ಯೆ ಸಾರಿಗೆ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ಪ್ರಕರಣದಲ್ಲಿ ತನಿಖೆ ಮಾಡಿ ತಪ್ಪಿತಸ್ಥರೆಂದು ತಿಳಿದು ಬಂದರೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಮಾಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್‌ನಿಂದ ವಿಶಾಲಗಡ್‌ಗೆ ತೆರಳುತ್ತಿದ್ದ ಬಸ್​ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಕಂಡೆಕ್ಟರ್​ ಕಂ ಡ್ರೈವರ್​​ ಒಬ್ಬರು ಸೀಟ್​ ಮೇಲೆ ನಮಾಜ್​ ಮಾಡಿದ್ದರು.

ADVERTISEMENT

ನಮಾಜ್​ ಮಾಡುವ ದೃಶ್ಯವನ್ನು ಪ್ರಯಾಣಿಕರೇ ಮೊಬೈಲ್​ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ಜಾಲತಾಣದಲ್ಲಿ ನಮಾಜ್‌ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಜಾಲತಾಣದಲ್ಲಿ ಕಂಡಕ್ಟರ್ ಕಂ ಡ್ರೈವರ್ ಕರ್ತವ್ಯದ ನಡುವೆ ಬಸ್‌ನಲ್ಲಿ ನಮಾಜ್‌ ಎಷ್ಟು ಸರಿ..? ಕರ್ತವ್ಯದಲ್ಲಿ ಇರುವಾಗ ಧಾರ್ಮಿಕ ಆಚರಣೆ ಸರಿಯೇ ಎಂದೆಲ್ಲಾ ಪ್ರಶ್ನೆ ಮಾಡಿ ವಿರೋಧ ವ್ಯಕ್ತಪಡಿಸಿದ್ದರು.

ಸಾರಿಗೆ ಬಸ್‌ ನಿಲ್ಲಿಸಿ ಬಸ್‌ ಸೀಟಿನ ಮೇಲೆ ಕುಳಿತು ನಮಾಜ್‌ ಮಾಡುತ್ತಿದ್ದ ದೃಶ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಆಗಿತ್ತು. ಮಾರ್ಗ ಮಧ್ಯೆ ಬಸ್​ ನಿಲ್ಲಿಸಿ ನಮಾಜ್‌ ಮಾಡಿದ ಬಗ್ಗೆ ಕ್ರಮಕ್ಕೆ ಒತ್ತಾಯ ಕೂಡ ಕೇಳಿ ಬಂದಿತ್ತು. ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಆದೇಶ ಹೊರಡಿಸಿದ್ದು. ತನಿಖೆ ನಡೆಸಿ ಕ್ರಮಕ್ಕೆ ಸೂಚಿಸಿದ್ದಾರೆ.

ದಿನಾಂಕ 29-04-2025 ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಆಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ ಎಂದಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್​ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂದು ಸಚಿವರು ತಿಳಿಸಿದ್ದಾರೆ. ತನಿಖೆ ಮಾಡಿ ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಲು ಸೂಚಿಸಿದ್ದು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags: BJPCongress Partyಬಿಜೆಪಿ
Previous Post

ಜಾತಿಗಣತಿಗೆ ನಿರ್ಧಾರ.. ಕಾಂಗ್ರೆಸ್​ನಲ್ಲೇ ಶುರುವಾಯ್ತು ತಲ್ಲಣ..

Next Post

ಕಾಂಗ್ರೆಸ್​ ಜಾತಿ ಗಣತಿ ದ್ವೇಷ ಸೃಷ್ಟಿಗೆ.. ಬಿಜೆಪಿ ಮಾಡಿದ್ರೆ ಐತಿಹಾಸಿಕ..

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕಾಂಗ್ರೆಸ್​ ಜಾತಿ ಗಣತಿ ದ್ವೇಷ ಸೃಷ್ಟಿಗೆ.. ಬಿಜೆಪಿ ಮಾಡಿದ್ರೆ ಐತಿಹಾಸಿಕ..

ಕಾಂಗ್ರೆಸ್​ ಜಾತಿ ಗಣತಿ ದ್ವೇಷ ಸೃಷ್ಟಿಗೆ.. ಬಿಜೆಪಿ ಮಾಡಿದ್ರೆ ಐತಿಹಾಸಿಕ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!