ಬೆಂಗಳೂರು: ಮೇ: 27 : ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಇಂದು ಅಥವಾ ನಾಳೆ ಖಾತೆಗಳ ಹಂಚಿಕೆ ಮಾಡಲಾಗುವುದು ಎಂದರು.