• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaramaiah: ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 8, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ, ಪ್ರಾಣಿ ಸಂಪತ್ತು ಮತ್ತು ಮನುಷ್ಯ ಸಂಪತ್ತಿನ‌ ಸಹಬಾಳ್ವೆ ಅತ್ಯಗತ್ಯ: ಸಿಎಂ

ADVERTISEMENT

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: Anil kumblec m siddaramaiahCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videoEshwar Khandrekarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

ಕೆರೆಗಳ ಬಫರ್‌ ಝೋನ್‌ ತಿದ್ದುಪಡಿ ವಿಧೇಯಕ: ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆ ಸಲ್ಲಿಕೆ – ಸಚಿವ ಎನ್‌ ಎಸ್‌ ಭೋಸರಾಜು

Next Post

DK Shivakumar: ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ..!!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

DK Shivakumar: ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada