ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಸಮಾಜದ ಹಿರಿಯರ ಬಗ್ಗೆ ಕೆಟ್ಟ ಪದವನ್ನ ಬಳಸಿರುವ ಬಗ್ಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಶಾಸಕ ಯತ್ನಾಳ್ ಹಾಗು ಸಚಿವ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಶಾಸಕ ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ಕನ್ನಡ ನಾಡಿಗೆ ಮತ್ತು ಕನ್ನಡ ಭಾಷೆಗೆ ಕಳಂಕವನ್ನ ತಂದಿದ್ದಾರೆ. ಕನ್ನಡ ನಾಡು ಮತ್ತೆ ಭಾಷೆಗೆ ಅದರೆದೇ ಆದ ಸ್ಥಾನಮಾನ ಇದೆ ಆದರೆ ಅವರು ಕನ್ನಡ ಭಾಷೆಯ ಮೂಲಕ ಬಳಸಿರುವ ಕೆಟ್ಟ ಪದಗಳು ಅವರ ವ್ಯಕ್ತಿತ್ವ ಮತ್ತು ಸಂಸ್ಕೃತಿಯನ್ನು ಎತ್ತಿ ತೋರಿಸುತ್ತಿದೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗು ಇದರಿಂದ ಕೆಟ್ಟ ಹೆಸರು ಬರುತ್ತಿದೆ ಆದ ಕಾರಣ ಇಂತಹ ನೀಚ ಸಂಸ್ಕೃತಿಯನ್ನ ಹೊಂದಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಯತ್ನಾಳ್ರನ್ನು ರಾಜ್ಯದಿಂದ ಗಡಿ ಪಾರು ಮಾಡಿ ಇವರಿಬ್ಬರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸುವಂತೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.