• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಸಾರ್ವಜನಿಕರ ಹಿತದೃಷ್ಟಿಯಿಂದ ಮೋಹನ್‌ ಕುಮಾರ್‌ ದಾನಪ್ಪ ಸರ್ಕಾರದೊಂದಿಗೆ ಸಮನ್ವಯತೆ ಕಾಪಾಡಿಕೊಂಡು ಗಮನ ಸೆಳೆಯುತ್ತಿದ್ದಾರೆ.

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Top Story, ಇದೀಗ, ಕರ್ನಾಟಕ, ಸರ್ಕಾರಿ ಗೆಜೆಟ್
0
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ನಿಯಮಬಾಹಿರವಾಗಿ ವಾಹನ ತಪಾಸಣಾ ನೆಪದಲ್ಲಿ ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಿ ಅಗತ್ಯ ಎಚ್ಚರಿಕೆ ನೀಡಿ ಕಾನೂನು ಬಾಹಿರ ವಾಹನ ತಪಾಸಣಾ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನ ರಾಜ್ಯದ ಡಿಜಿ ಮತ್ತು ಐಜಿಪಿರವರಿಗೆ ಬರೆದಿದ್ದ ಪತ್ರಕ್ಕೆ ಸ್ಮಂದನೆ ದೊರೆತಿದೆ.

ADVERTISEMENT

ಇಂದು ಗೃಹ ರಕ್ಷಕ್‌ ದಳದ ಡಿಐಜಿಪಿ ಸವಿತಾ. ಎಸ್‌ ಅವರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿಸ್ತ್ರತ ಆದೇಶ ಹೊರಡಿಸಿರುವ ಡಿಐಜಿಪಿ, ಸರ್ಕಾರದ ನಿಯಮಗಳನ್ನು ಮೀರಿದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಆದೇಶ ಪ್ರತಿ ಇಲ್ಲಿದೆ ನೋಡಿ..

 

ಮೋಹನ್‌ ಕುಮಾರ್‌ ದಾನಪ್ಪ ಬರೆದಿದ್ದ ಪತ್ರದಲ್ಲೇನಿತ್ತು..?

ಮೋಟಾರ್ ವಾಹನ ಕಾಯ್ದೆ-1988 ಹಾಗೂ ಕರ್ನಾಟಕ ಮೋಟಾರ್ ವಾಹನಗಳ ನಿಯಮಗಳು-1989ರಡಿಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕ (ಎ.ಎಸ್.ಐ) ಮತ್ತು ಮೇಲ್ಪಟ್ಟ ಅಧಿಕಾರಿಗಳಿಗೆ ವಾಹನ ತಪಸಣಾ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಢ ವಿಧಿಸುವ ಅಧಿಕಾರ ಹೊಂದಿರುತ್ತಾರೆ, ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ಧ ಕ್ರಮ ಜರುಗಿಸಲು ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್ಸ್‌ ಟೇಬಲ್‌ರವರುಗಳಿಗೆ ಎಫ್.ಟಿ.ವಿ.ಆರ್ ವರದಿಯನ್ವಯ ಟ್ರಾಫಿಕ್ ಚಲನ್‌ ಗಳನ್ನು ನೀಡಲು ಅವಕಾಶವಿದ್ದು ಮೋಟಾರ್ ವಾಹನ ಕಾಯ್ದೆ ಕಲಂ 133ರ ಪ್ರಕಾರ ಎಫ್.ಟಿ.ವಿ.ಆರ್ ನೋಟಿಸ್ ನೀಡಬಹುದಾಗಿರುತ್ತದೆ.

ಆದರೆ ಯಾವುದೇ ಅಧಿಕಾರ ಹೊಂದದೆ ಇರುವ ಗೃಹ ರಕ್ಷಕದಳದ ಸಿಬ್ಬಂದಿಗಳು ಮತ್ತು ಆಯಾ ಠಾಣೆಯ ಠಾಣಾಧಿಕಾರಿಗಳ ಹಾಗೂ ಗಸ್ತುವಾಹನಕ್ಕೆ ಚಾಲಕರಾಗಿ ಕರ್ತವ್ಯನಿರ್ವಹಿಸುತ್ತಿರುವ ಸಶಸ್ತ್ರ ಪಡೆಯ ಪೊಲೀಸ್ ಸಿಬ್ಬಂದಿಗಳು ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ನಿಯಮಬಾಹಿರವಾಗಿ ಸಾರ್ವಜನಿಕರ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುವುದು ಸರಿಯಲ್ಲ.

ಸಾರ್ವಜನಿಕರ ವಾಹನಗಳ ಕೀ ಕಿತ್ತುಕೊಂಡು ಕೇಸ್ ದಾಖಲಿಸುವುದಾಗಿ ಹೆದರಿಸಿ ಬೆದರಿಸಿ, ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿವುದು ಮತ್ತು ನಗರ ಪ್ರದೇಶಗಳನ್ನು ಹೊರತು ಪಡಿಸಿ ಗ್ರಾಮಾಂತರ ಜಿಲ್ಲೆಗಳಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ, ಗ್ರಾಮೀಣ ಹಾಗೂ ನಗರದ ನಿರ್ಜನ ಪ್ರದೇಶಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ವೈಯಕ್ತಿಕವಾಗಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ರಸ್ತೆಯಲ್ಲಿ ಸಾಗುವ ಎಲ್ಲಾ ವಾಹನಗಳನ್ನು ಅಡ್ಡಹಾಕಿ ಕಾನೂನು ಬಾಹಿರವಾಗಿ ವಾಹನ ತಪಸಣಾ ಮಾಡುತ್ತಿದ್ದು ಮತ್ತು ಸಾರ್ವಜನಿಕರಿಂದ ಅನಧಿಕೃತವಾಗಿ ಅಕ್ರಮ ಹಣವಸೂಲಿ ಮಾಡುತ್ತಿರುವುದಾಗಿ ಸಾರ್ವಜನಿಕ ವಲಯದಲ್ಲಿ ಹಾಗೂ ಕೆಲವು ಸಿಬ್ಬಂದಿಗಳು ಹಣವಸೂಲಿ ಮಾಡುವ ದೃಷ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುತ್ತವೆ,

ಸದರಿ ಸಿಬ್ಬಂದಿಗಳ ಅಧಿಕಾರ ದುರುಪಯೋಗ, ದುರ್ನಡತೆಯಿಂದ ನೊಂದ ಸಾರ್ವಜನಿಕರು ದೂರವಾಣಿ ಮುಖಾಂತರ ಹಾಗೂ ಪ್ರಾಧಿಕಾರದ ಕಛೇರಿಗೆ ಭೇಟಿ ನೀಡಿ ಸದರಿ ನಡೆಯ ವಿರುದ್ದ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುತ್ತಾರೆ. ಸದರಿ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಮೋಟಾರ್ ವಾಹನ ಕಾಯ್ದೆಯಲ್ಲಿ ನಿಗದಿ ಪಡಿಸಿದ ಅಧಿಕಾರಿಗಳನ್ನು ಹೊರತು ಪಡಿಸಿ ರಾಜ್ಯ ಪೊಲೀಸ್ ಇಲಾಖೆ ವ್ಯಾಪ್ತಿಯ ಗೃಹ ರಕ್ಷಕದಳ ಹಾಗೂ ಎಲ್ಲಾ ಘಟಕದ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ಸಾರ್ವಜನಿಕ ಹಾಗೂ ಇತರೆ ಯಾವುದೇ ವಾಹನಗಳನ್ನು ತಡೆಯದಂತೆ, ತಪಾಸಣಾ ಮಾಡದಂತೆ ಕಟ್ಟುನಿಟ್ಟಿನ ಸೂಕ್ತ ಆದೇಶ/ಸುತ್ತೋಲೆಯನ್ನು ಹೊರಡಿಸಿ ಮೇಲೆ ತಿಳಿಸಿದ ದುರ್ನಡತೆಗಳು ಮರುಕಳಿಸದಂತೆ ಆಯಾ ಠಾಣೆ ಮತ್ತು ಘಟಕಗಳಲ್ಲಿ ದಿನದ ರೋಲ್ ಕಾಲ್ ಸಮಯದಲ್ಲಿ ಕಡ್ಡಾಯವಾಗಿ ಸಿಬ್ಬಂದಿಗಳಿಗೆ ಅಗತ್ಯ ಎಚ್ಚರಿಕೆಯನ್ನು ನೀಡುವಂತೆ ಆಗ್ರಹಿಸಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ
ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ರಾಜ್ಯದ ಡಿಜಿಪಿಗೆ ಪತ್ರ ಬರೆದಿದ್ದರು.

Previous Post

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

Next Post

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada