ಬೆಂಗಳೂರು : ಸಿಎಂ ಹುದ್ದೆಗಾಗಿ ಭಾರೀ ಕಸರತ್ತು ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಕೇವಲ ನಾನೊಬ್ಬನೇ ಡಿಸಿಎಂ ಆಗಿರಬೇಕು ಷರತ್ತು ಡಿಕೆಶಿ ಹೈಕಮಾಂಡ್ ಮುಂದಿಟ್ಟಿದ್ದಾರೆ. ಹೀಗಾಗಿ ಈ ಬಾರಿ ಡಿಸಿಎಂ ಆಗುವ ಕನಸು ಕಂಡಿದ್ದ ಎಂಟಕ್ಕೂ ಅಧಿಕ ಕಾಂಗ್ರೆಸ್ ನಾಯಕರು ನಿರಾಸೆಗೆ ಒಳಗಾಗಿದ್ದಾರೆ.

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಡಿಸಿಎಂ ಸ್ಥಾನವನ್ನು ಹೆಚ್ಚು ಮಾಡಬೇಕು ಎಂಬ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಡಾ.ಜಿ ಪರಮೇಶ್ವರ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹೀಗೆ ಅನೇಕರು ಇಂದು ಡಿಸಿಎಂ ಹುದ್ದೆಗೆ ಡಿಮ್ಯಾಂಡ್ ಮಾಡುವ ಸಾಧ್ಯತೆಯಿದೆ.