ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದ್ದು ಅತ್ಯಂತ ಖಂಡನೀಯ ಎಂದು ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಹೇಳಿದ್ದಾರೆ.
ನೇಹಾ ಮೃತಹೇಹ ಇರಿಸಲಾಗಿದ್ದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ನಂತರ ನೇಹಾ ನಿವಾಸಕ್ಕೆ ಧಾವಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೊಂದು ಅತ್ಯಂತ ಹೇಯ ಕೃತ್ಯವಾಗಿದ್ದು, ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇಂಥ ಘಟನೆಗಳು ಮತ್ತೆ ಮರುಕಳಿಸಬಾರದು ಮತ್ತು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಯಾರೂ ಮಾಡಬಾರದು. ಅಪರಾಧಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.