ದೊಡ್ಡಬಳ್ಳಾಪುರದಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಉಗಾಂಡ ಮೂಲದ ಆಸೀನ ಆಗಷ್ (26) ಎಂಬ ವಿದ್ಯಾರ್ಥಿನಿಯು ಬುಧವಾರ ತಡರಾತ್ರಿ ಹಾಸ್ಟೆಲ್ನ 6ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತ ವಿದ್ಯಾರ್ಥಿನಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ದ ಉದ್ವಿಗ್ನಗೊಂಡ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾಲೇಜಿನ ಕಚೇರಿ, ಕ್ಯಾಂಟೀನ್ ಕಿಟಕಿ ಗಾಜುಗಳನ್ನು ಒಡೆದು ಹಾಕುವ ಮೂಲಕ ಕಾಲೇಜು ಆಡಳಿತ ಮಂಡಳಿ ವಿರುದ್ದ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಹತ್ತೋಟಿಗೆ ತರಲು ಯಶಸ್ವಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ತನಿಖೆಯ ನಂತರ ಎಲ್ಲವು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳು ಕರ್ನಾಟಕ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು ಈ ಕುರಿತು ವಿದ್ಯಾರ್ಥಿಗಳ ಪೋಷಕರು ದೂರು ದಾಖಲಿಸಿದ ನಂತರ ಧ್ರ ಮೂಲದ ವಿದ್ಯಾರ್ಥಿಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.












