• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಧ್ಯಯನ, ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅಧ್ಯಯನ, ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ.

ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಈ ಸಮ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ನಾವು ವಿವಿಗಳ ಮೂಲಕ ಕೊಡಬೇಕು ಎಂದರು.

ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು. ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ. ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು ಎಂದರು.

ಅತಿಥಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಇಂತಹ ವ್ಯಕ್ತಿಗಳನ್ನು ನೇಮಕ ಮಾಡಕೂಡದು. ವಿವಿಯ ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದಂತೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಾಕಷ್ಟು ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ. ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಶೇ. 3 ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು.

ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಶೋಧನೆಯ ಫಲ ಗ್ರಂಥಾಲಯಗಳಲ್ಲಿ ಉಳಿಯಬಾರದು. ಸಮಾಜವನ್ನು ತಲುಪಬೇಕು. ಆಗ ಮಾತ್ರ ಸಂಶೋಧನೆ ಫಲಪ್ರದವಾಗುವುದು ಎಂದರು.

Tags: CM SiddaramaiahLibraryVidhansoudayouthsಮುಖ್ಯಮಂತ್ರಿ ಸಿದ್ದರಾಮಯ್ಯಯುವಜನತೆವಿಧಾನಸೌಧ
Previous Post

ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ

Next Post

ವರಮಹಾಲಕ್ಷ್ಮಿ ಹಬ್ಬಕ್ಕೆ ಬರಲಿದೆ ʼಯಥಾಭವʼ ಚಿತ್ರದ ಟೀಸರ್

Related Posts

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

by ಪ್ರತಿಧ್ವನಿ
May 1, 2026
0

ವೆಸ್ಟ್ ಬೆಂಗಾಲ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುಮಾರು 77 ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಯಥಾಭವ

ವರಮಹಾಲಕ್ಷ್ಮಿ ಹಬ್ಬಕ್ಕೆ ಬರಲಿದೆ ʼಯಥಾಭವʼ ಚಿತ್ರದ ಟೀಸರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada