ಬೆಂಗಳೂರು (Bengaluru): ಜಾತಿ ಗಣತಿ ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ (K Jayaprakash Hegde) ಅವರು ವರದಿಯನ್ನು ಹಸ್ತಾಂತರಿಸಿದರು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.
ವರದಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್ನಲ್ಲಿ ಜಾತಿಗಣತಿ ವರದಿ ಚರ್ಚಿಸಿ, ನಿರ್ಧಾರ ಕೈಗೊಳ್ಳತ್ತೇವೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ವರದಿ ಸಿದ್ಧಪಡಿಸಿದ್ದೇವೆ. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಜಾತಿಗಣತಿ ವರದಿಯನ್ನು ಓದದೇ ಅವೈಜ್ಞಾನಿಕ ಎಂದು ಹೇಗೆ ಹೇಳುತ್ತೀರಿ. ನಾವು ಸಿದ್ಧಪಡಿಸಿದ ಜಾತಿ ಗಣತಿಯ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
#karnataka #bengaluru #castecensusreport #siddaramaiah #jayaprakashhegde