ಜೂನ್ 13 ರಂದು ನಡೆಯಲಿರುವ ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ನ ಇಂದಿನಿಂದ ಪ್ರತಿನಿತ್ಯ ಬೆಳಿಗ್ಗೆ 11 ಘಂಟೆಯಿಂದ ಮಧ್ಯಾಹ್ನ 3 ಘಂಟೆಯವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಿದ್ದು, ವಿಧಾನಸಭೆಯ ಕಾರ್ಯದರ್ಶಿ ಎಂ. ಕೆ.ವಿಶಾಲಾಕ್ಷಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಇನ್ನು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಒಟ್ಟು 11 ಸ್ಥಾನಗಳು ಭರ್ತಿಯಾಗಬೇಕಾಗಿದ್ದು, ಇದರಲ್ಲಿ ಶಾಸಕರ ಸಂಖ್ಯಾ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್‌ಗೆ 7, ಬಿಜೆಪಿಗೆ 3 ಹಾಗೂ ಜೆಡಿಎಸ್‌ಗೆ 1 ಸ್ಥಾನ ಲಭಿಸಲಿದೆ.
ಇನ್ನು ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಜೂನ್ 3 ರ ಮಧ್ಯಾಹ್ನ 3 ಘಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ.