• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, November 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಯಲಹಂಕದಲ್ಲಿ ಪಾಲಿಕೆ ದಿಢೀರ್ ಕಾರ್ಯಾಚರಣೆ: 8 ವಾಣಿಜ್ಯ ಮಳಿಗೆಗಳಿಗೆ ಬೀಗ!

Shivakumar by Shivakumar
October 29, 2026
in ಕರ್ನಾಟಕ
0
ಬೆಂಗಳೂರಿನ ಯಲಹಂಕದಲ್ಲಿ ಪಾಲಿಕೆ ದಿಢೀರ್ ಕಾರ್ಯಾಚರಣೆ: 8 ವಾಣಿಜ್ಯ ಮಳಿಗೆಗಳಿಗೆ ಬೀಗ!
Share on WhatsAppShare on FacebookShare on Telegram

ಬೆಂಗಳೂರಿನ ವಸತಿ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ವಾಣಿಜ್ಯ ಚಟುವಟಿಕೆ ನಡೆಸುವ ಮಳಿಗೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಯಲಹಂಕದ ಎಸ್‌ಎಫ್‌ಎಸ್ 208 (SFS 208) ವಸತಿ ಬಡಾವಣೆಯಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಟು ವಾಣಿಜ್ಯ ಮಳಿಗೆಗಳನ್ನು ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮುಚ್ಚಿಸಿದ್ದಾರೆ.

ADVERTISEMENT

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದೆ. ವಸತಿ ಪ್ರದೇಶಗಳಲ್ಲಿ ಅನುಮತಿಯಿಲ್ಲದೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿದ್ದವು.

Siddaramaiah in Basava Jayanthi : ಚಾಮರಾಜನಗರದಲ್ಲಿ ಸಿದ್ದರಾಮಯ್ಯನಿಗೆ ಅದ್ದೂರಿ ಸ್ವಾಗತ #pratidhvani

ಇದರಿಂದ ಸಂಚಾರ ದಟ್ಟಣೆ ಹಾಗೂ ನೈರ್ಮಲ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರು ಈ ಕಾರ್ಯಕರ್ತನ ಪಕ್ಷ ನಿಷ್ಠೆ ಕಲಿಯಬೇಕಿದೆ..! #pratidhvani

ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಸುಪ್ರೀಂ ಕೋರ್ಟ್ ಆದೇಶಗಳು ಹಾಗೂ ವಲಯ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿರುವ ಮಳಿಗೆಗಳನ್ನು ಮುಚ್ಚಿಸಿದ್ದಾರೆ.

 

ಬೀಗ ಬಿದ್ದ ಎಂಟು ಮಳಿಗೆಗಳು ಯಾವುವು?

ಕಾರ್ಯಾಚರಣೆಯಲ್ಲಿ ಬಿಗ್ ಡ್ಯಾಡೀಸ್ ಬಿಬಿಕ್ಯೂ ಶಾವರ್ಮಾ, ಜೈನ್ ತಟ್ಟೆ ಇಡ್ಲಿ, ನಾಟಿ ಸ್ಟೈಲ್ ಬಿರಿಯಾನಿ ಮನೆ, ಆರ್‌ಎಸ್ ಮೋಟಾರ್ಸ್, ಡೆನ್ಸ್ ಸ್ಮೋಕ್, ಹೋಳಿಗೆ ಮನೆ, ಹೆಲ್ದಿ ಐಸ್ ಮತ್ತು ನಮ್ಮ ಬಿರಿಯಾನಿ ಮಳಿಗೆಗಳನ್ನು ಮುಚ್ಚಲಾಗಿದೆ.

Council Fight, reasons for white wash of Congress? Opps sweeps all seats.!ಪರಿಷತ್ ಫೈಟ್, ಕಾಂಗ್ರೆಸ್ ಔಟ್

 

ವಸತಿ ಪ್ರದೇಶಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರಗಳ ಅನುಮತಿ ಪಡೆಯದೆ ವಾಣಿಜ್ಯ ಚಟುವಟಿಕೆ ನಡೆಸುವುದು ಅಥವಾ ವಸತಿ ನಿವೇಶನಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವುದನ್ನು ಸಹಿಸುವುದಿಲ್ಲ ಎಂದು ಪಾಲಿಕೆ ಎಚ್ಚರಿಸಿದೆ.

 

ಜಿಬಿಎ ಕಾಯ್ದೆ, 2024 ಹಾಗೂ ಅನ್ವಯವಾಗುವ ಕಾನೂನು ಮತ್ತು ನಿಯಮಗಳ ಪ್ರಕಾರ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡನಾತ್ಮಕ ಮತ್ತು ಇತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಸತಿ ಪ್ರದೇಶಗಳ ನಿಯಮಬಾಹಿರ ವಾಣಿಜ್ಯ ಚಟುವಟಿಕೆಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಪರಿಶೀಲನೆ ಮತ್ತು ಕ್ರಮ ಮುಂದುವರಿಯುವ ಸಾಧ್ಯತೆಯಿದೆ.

 

Tags: BBMPbengaluruBengaluru North City CorporationCommercial ShopsGBA Act 2024Illegal Commercial Activitieskarnataka newsSFS 208yelahanka
Previous Post

ಚಿಪ್ಸ್ ಪ್ಯಾಕೆಟ್‌ನಲ್ಲಿ ತೂಕದ ಮೋಸ ಆರೋಪ:ಕಂಪನಿಗೆ ಆಯೋಗದ ಆದೇಶ ಏನು ?

Next Post

ಕಮ್ಯುನಿಸ್ಟ್ ಐಕ್ಯತೆ-ಆದ್ಯತೆ ಮತ್ತು ಬಾಧ್ಯತೆ

Related Posts

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಕರ್ನಾಟಕ

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

by Shivakumar
November 6, 2026
0

ಬೆಂಗಳೂರಿನಲ್ಲಿ ಒಂದು ದಿನ ವಿದ್ಯುತ್ ವ್ಯತ್ಯಯವಾದರೂ ಜನರು ಪರದಾಡುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸತತ ನಾಲ್ಕು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ...

Read moreDetails
Awareness for Eco-friendly Diwali Celebrations in State Schools and Colleges: Education Department Order

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಾಗೃತಿ : ಶಿಕ್ಷಣ ಇಲಾಖೆ ಆದೇಶ

November 6, 2026
Scouts and Guides Foundation Day: Flag sticker released by Higher Education Minister Basavaraj Rayareddy

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಂದ ಧ್ವಜ ಚೀಟಿ ಬಿಡುಗಡೆ

November 6, 2026
Recruitment for Kalyana Karnataka to be conducted via KEA instead of KPSC: Minister Priyank Kharge issues firm directive

ಕೆಪಿಎಸ್‌ಸಿ ಬದಲು ಕೆಇಎ ಮೂಲಕ ಕಲ್ಯಾಣ ಕರ್ನಾಟಕದ ನೇಮಕಾತಿ : ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

November 6, 2026
Blending of up to 31.2% ethanol in petrol: Karnataka government seeks clarification from the Centre

ಪೆಟ್ರೋಲ್‌ನಲ್ಲಿ ಶೇ. 31.2 ರವರೆಗೆ ಎಥೆನಾಲ್ ಮಿಶ್ರಣ : ಕೇಂದ್ರದಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ

November 6, 2026
Next Post
Communist Unity—Priority and Obligation

ಕಮ್ಯುನಿಸ್ಟ್ ಐಕ್ಯತೆ-ಆದ್ಯತೆ ಮತ್ತು ಬಾಧ್ಯತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada