• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಎನ್‌ಸಿಇಆರ್‌ಟಿ ಪಠ್ಯ ಪರಿಷ್ಕರಣೆ ಸಮಿತಿಯಲ್ಲಿ ಸುಧಾ ಮೂರ್ತಿ, ಶಂಕರ್‌ ಮಹಾದೇವನ್‌ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
August 13, 2023
in ಇದೀಗ, ದೇಶ
0
ಸುಧಾ ಮೂರ್ತಿ
Share on WhatsAppShare on FacebookShare on Telegram

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) 3ರಿಂದ 12ನೇ ತರಗತಿವರೆಗಿನ ಸಿಬಿಎಸ್ಇ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಹೊಸ ಸಮಿತಿ ರಚಿಸಿದ್ದು ಇದರಲ್ಲಿ ಲೇಖಕಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾ ಮೂರ್ತಿ ಸ್ಥಾನ ಪಡೆದಿದ್ದಾರೆ.

ADVERTISEMENT

ಸುಧಾ ಅವರ ಜತೆಗೆ ಗಾಯಕ ಶಂಕರ್ ಮಹಾದೇವನ್, ಆರ್ಥಿಕ ತಜ್ಞ ಸಂಜೀವ್ ಸನ್ಯಾಲ್ ಅವರು ಈ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿಯ (ಎನ್ಎಸ್‌ಟಿಸಿ) ಸದಸ್ಯರಾಗಿ ಸ್ಥಾನ ಪಡೆದಿದ್ದಾರೆ ಎಂದು ಎನ್‌ಸಿಇಆರ್‌ಟಿ ಪ್ರಕಟಣೆ ತಿಳಿಸಿದೆ ಎಂದು ಶನಿವಾರ (ಆಗಸ್ಟ್‌ 12) ವರದಿಯಾಗಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾಂತದ ಒಳಗೆ ಪಠ್ಯಪುಸ್ತಕ ರಚನೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ವಿದ್ಯಾರ್ಥಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಪೂರೈಸುವ ಹೊಣೆಯನ್ನು ಸುಧಾ ಮೂರ್ತಿ ಅವರನ್ನೊಳಗೊಂಡ ಸಮಿತಿಗೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ ಮೇ ತಿಂಗಳಿನಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮದ ನಾನಾ ತರಗತಿಯ ಪಠ್ಯಪುಸ್ತಕಗಳಲ್ಲಿ ಹಲವು ವಿಷಯಗಳು ಹಾಗೂ ಅಧ್ಯಾಯಗಳನ್ನು ಕೈಬಿಡಲಾಗಿತ್ತು. ಬಿಜೆಪಿ ನೇತೃತ್ವದ ಸರ್ಕಾರವು ಪ್ರತೀಕಾರಕ್ಕೆ ಇಳಿದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ಪಠ್ಯವನ್ನು ತರ್ಕಬದ್ಧಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಪಠ್ಯಪುಸ್ತಕಗಳಲ್ಲಿ ಉದ್ದೇಶ ಪೂರ್ವಕವಲ್ಲದ ಕೆಲವು ಲೋಪಗಳಿವೆ. ಪರಿಣತರ ಶಿಫಾರಸು ಅನ್ವಯ ಇದನ್ನು ಸರಿಪಡಿಸಲಾಗುತ್ತದೆ ಎಂದು ಎನ್‌ಸಿಇಆರ್‌ಟಿ ಇದಕ್ಕೆ ಸ್ಪಷ್ಟನೆ ನೀಡಿತ್ತು.

ಸುಧಾ ಮೂರ್ತಿ ಸೇರಿ ಒಟ್ಟು 19 ಸದಸ್ಯರನ್ನು ಒಳಗೊಂಡ ಈ ಸಮಿತಿಯು 3ರಿಂದ 12ನೇ ತರಗತಿವರೆಗೆ ಪಠ್ಯಕ್ರಮ, ಪಠ್ಯಪುಸ್ತಕಗಳು ಹಾಗೂ ಕಲಿಕಾ ಪರಿಕರಗಳನ್ನು ಅಂತಿಮಗೊಳಿಸಲಿದೆ. ರಾಷ್ಟ್ರೀಯ ಶಿಕ್ಷಣ ಯೋಜನೆ ಮತ್ತು ಆಡಳಿತಾತ್ಮಕ (ಎನ್ಐಇಪಿಎ) ಕುಲಪತಿ ಎಂ.ಸಿ. ಪಂತ್ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದೆ.

ದೇಶದಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) 2020ರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕೆ. ಕಸ್ತೂರಿರಂಗನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯು ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್-ಎಸ್ಇ) ರಚಿಸಿದೆ. ಈಗಾಗಲೇ, ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಈ ಕುರಿತು ಕರಡು ಸಲ್ಲಿಸಲಾಗಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆಯನ್ನೂ ಮಾಡಲಾಗಿದೆ. ಇದರ ಅನ್ವಯವೇ ಸಮಿತಿಯ ಸದಸ್ಯರು ಪಠ್ಯಕ್ರಮ ಪರಿಷ್ಕರಣೆಯ ಕೆಲಸ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಸುಧಾ ಮೂರ್ತಿ ಅವರನ್ನು ಒಳಗೊಂಡ ಎನ್ಎಸ್‌ಟಿಸಿ ಸಮಿತಿಗೆ ಪಠ್ಯಕ್ರಮ, ಬೋಧನೆ ಹಾಗೂ ಕಲಿಕಾ ಸಾಮಗ್ರಿಗಳನ್ನು ಸಿದ್ಧಪಡಿಸುವ ಜವಾಬ್ದಾರಿ ನೀಡಲಾಗಿದೆ. ಅಲ್ಲದೇ, ಈ ಸಮಿತಿಯು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ ಅನುಗುಣವಾಗಿಯೇ ಒಂದು ಮತ್ತು ಎರಡನೇ ತರಗತಿಯ ಹಾಲಿ ಪಠ್ಯಪುಸ್ತಕಗಳಲ್ಲಿ ಕೆಲವು ಸೂಕ್ಷ್ಮ ಪರಿಷ್ಕರಣೆ ಕಾರ್ಯವನ್ನೂ ಮಾಡಲಿದೆ ಎಂದು ಎನ್ಸಿಇಆರ್ಟಿಯ ಅಂತರಿಕ ಟಿಪ್ಪಣಿಯಲ್ಲಿ ವಿವರಿಸಲಾಗಿದೆ.

ಪಠ್ಯಪುಸ್ತಕಗಳು ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ಈ ಸಮಿತಿಯು ಅಂತಿಮಗೊಳಿಸಲಿದೆ. ಬಳಿಕ ಎನ್ಸಿಇಆರ್ಟಿಯು ಹೊಸ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಿಸಲಿದೆ.

ಈ ಎನ್ಎಸ್‌ಟಿಸಿ ಸಮಿತಿಯಲ್ಲಿ ಸುಧಾಮೂರ್ತಿ, ಶಂಕರ್ ಮಹಾದೇವನ್ ಸೇರಿ ಅನೇಕರಿದ್ದಾರೆ. ಪ್ರಿನ್ನಟನ್ ವಿಶ್ವವಿದ್ಯಾಲಯದ ಗಣಿತ ಪ್ರಾಧ್ಯಾಪಕ ಮಂಜುಲ್ ಭಾರ್ಗವ್ ಈ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಉಳಿದಂತೆ ಗಣಿತಶಾಸ್ತ್ರಜ್ಞೆ ಸುಜಾತಾ ರಾಮದೊರೈ, ಬ್ಯಾಡ್ಮಿಂಟನ್ ಆಟಗಾರ ಯು. ವಿಮಲ್ಕುಮಾರ್, ಕೇಂದ್ರ ನೀತಿ ಅಧ್ಯಯನಗಳ ಸಂಸ್ಥೆಯ ಅಧ್ಯಕ್ಷ ಎಂ.ಸಿ. ಶ್ರೀನಿವಾಸ್ ಹಾಗೂ ಭಾರತೀಯ ಭಾಷಾ ಸಮಿತಿ ಅಧ್ಯಕ್ಷ ಚ.ಮೂ. ಕೃಷ್ಣಮೂರ್ತಿ ಸಮಿತಿಯಲ್ಲಿರುವ ಪ್ರಮುಖ ಸದಸ್ಯರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ವಿವಿಧ ಕ್ಷೇತ್ರದ ಪರಿಣತರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಅಲ್ಲದೇ, ಸಮಿತಿಯ ಅಧ್ಯಕ್ಷರು ವಿವಿಧ ಪಠ್ಯಕ್ರಮ ಪ್ರದೇಶ ಗುಂಪುಗಳನ್ನೂ (ಸಿಎಜಿ) ರಚಿಸಿದ್ದಾರೆ. ಹಲವು ವಿಷಯತಜ್ಞರು ಈ ಗುಂಪಿನಲ್ಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಗುಂಪುಗಳು ಪ್ರತಿಯೊಂದು ವಿಷಯಗಳ ಪಠ್ಯಕ್ರಮ ಮತ್ತು ಕಲಿಕಾ ಸಾಮಗ್ರಿಗಳನ್ನು ಅಭಿವೃದ್ಧಿಪಡಿಸಲು ಸಮಿತಿಗೆ ಅಗತ್ಯ ಸಹಾಯ ನೀಡಲಿವೆ. ಅಲ್ಲದೇ, ಇತರೇ ಕ್ಷೇತ್ರಗಳ ಪರಿಣತರಿಂದಲೂ ಸಲಹೆ, ಸಮಾಲೋಚನೆ ಹಾಗೂ ಬೆಂಬಲ ಪಡೆಯುವ ಅಧಿಕಾರವನ್ನು ಸುಧಾ ಮೂರ್ತಿ ಅವರನ್ನೊಳಗೊಂಡ ಸಮಿತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Tags: infosys foundationNational Council of Educational Research and TrainingNational Syllabus and Teaching Learning Material CommitteeNCERTNCERT textbook panelrevise textbooksShankar Mahadevansudha murthyಇನ್ಫೋಸಿಸ್‌ ಫೌಂಡೇಶನ್‌ಎನ್‌ಸಿಇಆರ್‌ಟಿಪಠ್ಯ ಪರಿಷ್ಕರಣೆರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಶಂಕರ್‌ ಮಹಾದೇವನ್‌ಸುಧಾ ಮೂರ್ತಿ
Previous Post

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಬಿ.ಇಡಿ ಪದವಿ ಬೇಕಿಲ್ಲ: ಸುಪ್ರೀಂ ಕೋರ್ಟ್

Next Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025
Next Post
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ

Please login to join discussion

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada