ಚಲಿಸುತ್ತಿದ್ದ ಕಬ್ಬಿನ ಟ್ರಾಕ್ಟರ್ ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದೆ. ಇದರಿಂದ ಟ್ರ್ಯಾಕ್ಟರ್ ನಲ್ಲಿದ್ದ ಕಬ್ಬಿನ ಲೋಡ್ ಹೊತ್ತಿ ಉರಿದಿದೆ.
ಸ್ಥಳೀಯ ಪೊಲೀಸರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬಾಗಳಕೋಟೆಯ್ ಬಸವೇಶ್ವರ ವೃತ್ತದಲ್ಲಿ ಬಳಿ ಟ್ರ್ಯಾಕ್ಟರ್ ನಿಲ್ಲಿಸಿ ಬೆಂಕಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಭುಲಿಂಗೇಶ್ವರ ಕಾರ್ಖಾನೆಗೆ ಕಬ್ಬು ಟ್ರ್ಯಾಕ್ಟರ್ ಮೂಲಕ ಕಬ್ಬು ಸಾಗಿಸಲಾಗುತ್ತಿತ್ತು. ಜಮಖಂಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.