ಕಬ್ಬು ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಬೆಳೆ ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡ ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.
ರೈತ ಪ್ರಕಾಶ್ ಎಂಬುವವರಿಗೆ ಜಮೀನು ಸೇರಿದ್ದು ಎರಡು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದರು. ಕಟಾವಿಗೆ ಬಂದಿದ್ದ ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.
ಈ ಕೂಡಲೇ ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಬೇಕು ಮತ್ತು ಬೆಳೆ ನಷ್ಟ ಅನುಭವಿಸಿದ ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತ ಮುಖಂಡರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.