ತಾಯಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಗ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ.
ಮಹೇಂದ್ರ(20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದ್ದು ತನ್ನ ತಾಯಿಯ ಅಕ್ರಮ ಸಂಬಂಧವನ್ನು ಕಂಡು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಈ ಹಿಂದೆ ಅನೈತಿಕ ಸಂಬಂಧದ ಕಾರಣ ಪತಿ-ಪತ್ನಿ ನಡುವೆ ಗಲಾಟೆ ಏರ್ಪಟ್ಟಿತ್ತು ಈ ವಿಷಯ ತಿಳಿದ ಪುತ್ರ ಮಹೇಂದ್ರ ರಾತ್ರಿ ಮನೆಯ ಸದಸ್ಯರು ಮಲಗಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.













