ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕುಷ್ಟರೋಗ ನಿಯಂತ್ರಣಧಿಕಾರಿ ರೂಪಾ(50) ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ವೈದ್ಯೆ ಎಂದು ತಿಳಿದು ಬಂದಿದೆ.

ವಿ.ಪಿ.ಬಡಾವಣೆಯ ನಿವಾಸದಲ್ಲಿ ವೈದ್ಯೆಯ ಶವ ಪತ್ತೆಯಗಾಇದ್ದು ರಕ್ತ ಮಡುವಿನಲ್ಲಿ ಬಿದ್ದಿದ್ದ ರೂಪಾರನ್ನು ಕಂಡು ಮನೆ ಕೆಲಸದವರು ಪತಿ ಡಾ.ರವಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪತಿ ಪತ್ನಿ ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಪರಿಶೀಲನೆ ನಡೆಸಲಿದ್ದು ಮರಝೊತ್ತರ ಪರೀಕ್ಷೆಯ ನಂತರ ಶವವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಮೃತಪಟ್ಟ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಮತ್ತು ಮೃತರ ಸಹೋದರ ದೂರ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.






