• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ..!!

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ (Dr. CN Ashwath Narayan) ಅವರು ಆರೋಪಿಸಿದ್ದಾರೆ.

ADVERTISEMENT


ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಕಲಬುರ್ಗಿ ಜಿಲ್ಲೆಯ ಗ್ರಂಥಾಲಯದ ಗ್ರಂಥಪಾಲಕಿ ಭಾಗ್ಯವತಿ ಅವರು 15 ತಿಂಗಳಿಂದ ಗ್ರಂಥಾಲಯದ ದಿನಪತ್ರಿಕೆ ಬಿಲ್ಲನ್ನು ಪಾವತಿಸಿಲ್ಲ, ಕರೆಂಟ್ ಬಿಲ್ಲನ್ನು ಪಾವತಿಸಿಲ್ಲ, ಗ್ರಂಥಾಲಯದಲ್ಲಿ ಕಾರ್ಯವನ್ನು ಮಾಡುವುದಕ್ಕೆ ಯಾವುದೇ ರೀತಿಯ ಸಹಕಾರ ಇಲ್ಲ. ಗ್ರಂಥಪಾಲಕಿ ಪ್ರತಿನಿತ್ಯ ಅನುಭವಿಸುತ್ತಿದ್ದ ಅವಮಾನ ಮತ್ತು ಅಸಹಾÀಯಕತೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡು ಸರ್ಕಾರಕ್ಕೆ ಬಹಳ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ವಿವರಿಸಿದರು. ಲಜ್ಜೆಗೆಟ್ಟ ಈ ಸರ್ಕಾರ ಯಾವ ಜವಾಬ್ದಾರಿ ಇಲ್ಲದೆ ಮನಬಂದಂತೆ ಏನು ಬೇಕಾದರೂ ಮಾಡಿ ಜಯಿಸಬಹುದು; ಯಾವುದರ ಬಗ್ಗೆ ಪರಿಜ್ಞಾನ ಇಲ್ಲದಿದ್ದರೂ ಕಾರ್ಯ ನಿರ್ವಹಿಸುತ್ತಿರುವ ಇಂತಹ ಕೆಟ್ಟ ಸರ್ಕಾರವನ್ನು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಬಯಲಿಗೆಳೆಯುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಎಂದು ತಿಳಿಸಿದರು.

ಒಳಜಗಳದಿಂದ ಬೆಂಗಳೂರು ಕಡೆಗಣನೆ…
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಂಗಳೂರು ನಗರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಒಳಜಗಳದಿಂದ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ (Dr. CN Ashwath Narayan) ಅವರು ಆರೋಪಿಸಿದರು. ಇಂದು ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಆಗುತ್ತಿಲ್ಲ, ಕಸ ವಿಲೇವಾರಿ ಮಾಡುವುದಕ್ಕೆ ಆಗುತ್ತಿಲ್ಲ ಮತ್ತು ಕಾನೂನು ಸುವ್ಯವಸ್ಥೆ ನೀಡುವುದಕ್ಕೆ ವಿಫಲರಾಗಿದ್ದಾರೆ ಎಂದು ತಿಳಿಸಿದರು. ಉದ್ಯಮಿಗಳಾದ ಕಿರಣ್ ಮಜುಂದಾರ್-ಶಾ ಅವರು, ಮೋಹನ್ ದಾಸ್ ಪೈ, ಬ್ಲಾಕ್ ಬಕ್‍ನ ಸಿಇಒ ಅವರು ಬೆಂಗಳೂರು ಅವ್ಯವಸ್ಥೆ ಬಗ್ಗೆ ಹೇಳುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಬೆದರಿಕೆ ಹಾಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಯಾರಾದರೂ ಖಂಡಿಸಿದರೆ, ಪ್ರಶ್ನೆ ಮಾಡಿದರೆ ಅವರು ಬಿಜೆಪಿ ಬೆಂಬಲಿಗರು ಎಂದು ಹೇಳುತ್ತಾರೆ. ಅವರು ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ (Dr. B R Ambedkar) ಅವರ ಬಗ್ಗೆ ಉಲ್ಲೇಖ ಮಾಡುತ್ತಿರುತ್ತಾರೆ. ಅವರಿಗೆ ನೈತಿಕತೆ ಇದೆಯೇ?; ಅವರು ಯಾವ ಪ್ರಜಾಪ್ರಭುತ್ವವನ್ನು ಗೌರವಿಸುತ್ತಾರೆ ಹಾಗೂ ಪ್ರಜಾಪ್ರಭುತ್ವದ ಅವರಿಗೆ ತಿಳಿದಿದೆಯೇ ಎಂದು ಕೇಳಿದರು.


ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರ ಮಗನಾಗಿರುವುದಕ್ಕೆ ಇಂದು ಅವರಿಗೆ ಸ್ಥಾನ ಸಿಕ್ಕಿದೆ. ಪ್ರಿಯಾಂಕ್ ಖರ್ಗೆ(Priyank Kharge) ಆಗಿಲ್ಲದ್ದಿದ್ದರೆ ಅವರ ವಿದ್ಯಾರ್ಹತೆಗೆ ಕಚೇರಿ ಸಹಾಯಕ ಉದ್ಯೋಗವೂ ಸಿಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಸಾರ್ವಜನಿಕರು, ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಸರಣಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ಕಾಣುತ್ತಿದ್ದೇವೆ ಎಂದು ಆಕ್ಷೇಪಿಸಿದರು. ಇಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಜಿಲ್ಲೆ ಮತ್ತು ಇಲಾಖೆ ಯಲ್ಲಿ ವೇತನ ನೀಡಿರುವುದಿಲ್ಲ. ಇದೆಲ್ಲವನ್ನು ಗಮನಿಸಿದ ಮಹಾನ್ ದೇಶಭಕ್ತ, ಮಹಾನ್ ಸಾಧಕ ಎಲ್ಲಿ ಹೋಗಿದ್ದೀರ ಎಂದು ಪ್ರಶ್ನಿಸಿದರು.


ಇಂತಹ ವಿಚಾರಗಳು ಇದ್ದಾಗ ಪ್ರಿಯಾಂಕ್ ಖರ್ಗೆ (Priyank Kharge) ಅವರ ಧ್ವನಿ ಅಡಗಿ ಹೋಗುತ್ತದೆ. ಎಷ್ಟಾದರೂ ಹೇಳಿ; ಏನಾದರೂ ಹೇಳಿ- ಅವರು ವಿಚಾರಗಳ ಸೂಕ್ಷ್ಮತೆಯನ್ನೇ ಕಳೆದುಕೊಂಡಿದ್ದಾರೆ ಎಂದರು. ಎಷ್ಟೇ ಅಂಕುಶದಲ್ಲಿ ಅವರಿಗೆ ಚುಚ್ಚಿದರು ತಲೆಗೆ ಬಂದ ಹಾಗೆ, ಮನಬಂದ ಹಾಗೆ ಮಾತನಾಡುತ್ತಾರೆ. ರಾಜ್ಯದ ಜನ ಪಶ್ಚಾತ್ತಾಪಪಡುತ್ತಿದ್ದು, ಜನರ ಜೀವವನ್ನು ತೆಗೆದುಕೊಳ್ಳುವ ಸರ್ಕಾರ ತೊಲಗಲಿ; ಸಾಕಪ್ಪ ಸಾಕು ಈ ಸರ್ಕಾರ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್(R Ashok), ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ (P Rajeev) ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ (Ashwath Narayan) ಅವರು ಉಪಸ್ಥಿತರಿದ್ದರು

Tags: BJPbjp karnatakaCN Ashwath NarayancongressCongress GovtKalburgiKarnatakaMallikarjun KhargePriyank KhargeR AshokRSSSanjeev
Previous Post

CM Siddaramaiah: ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು..!!

Next Post

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ” .

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ "ಕೊರಗಜ್ಜ" .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada