ಮಂಡ್ಯ: ರಾಜಕೀಯ ವಲಯದಲ್ಲಿತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಬಹಿರಂಗವಾಗಿದ್ದು, ಬಿಜೆಪಿಗೆ ಅಧಿಕೃತವಾಗಿ ಬಾಹ್ಯ ಬೆಂಬಲ ಘೋಷಿಸಿದ್ದಾರೆ.
ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ. ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಮೋದಿ ನಾಯಕತ್ವವನ್ನು ನಾನು ನಂಬಿದ್ದೇನೆ. ಈ ಕಾರಣಕ್ಕಾಗಿ ನಾನು ಬಿಜೆಪಿಗೆ ನಾನು ಬೆಂಬಲಿಸುವುದಾಗಿ ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ನಾಲ್ಕು ವರ್ಷಗಳಿಂದ ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದರು. ನನ್ನ ಹಲವು ಹೋಜನೆಗಳಿಗೆ ಕೇಂದ್ರದಿಂದ ಅಪಾರ ನೆರವು ಸಿಕ್ಕಿದೆ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇನೆ. ಬದಲಾವಣೆಗಾಗಿ ನನಗೆ ಇನ್ನಷ್ಟು ಶಕ್ತಿಯ ಅಗತ್ಯವಿದೆ ಎಂದು ಹೇಳಿದರು.