ಮಂಡ್ಯ ಸಂಸದೆ ಸುಮಲತಾ ಆಪ್ತ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸೇರಿದಂತೆ ಅನೇಕರು ಜೆಡಿಎಎಸ್-ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾದ ಅಶ್ವತ್ಥನಾರಾಯಣ, ನಾರಾಯಣ ಗೌಡ, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಪಕ್ಷದ ಬಾವುಟ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಶ್ವತ್ಥನಾರಾಯಣ ಕಾಂಗ್ರೆಸ್-ಜೆಡಿಎಸ್ ಕುಟುಂಬ ರಾಜಕಾರಣದ ಪಕ್ಷಗಳಾದರೆ ಬಿಜೆಪಿ ಜನಪರ ಆಡಳಿತ ನೀಡುವ ಪಕ್ಷ. ಮಂಡ್ಯ ಜಿಲ್ಲೆಯ ಹಿಂದೆ ಅಭಿವೃದ್ದಿಗೆ ಹೆಸರುವಾಸಿಯಾಗಿತ್ತು ಆದರೆ, ರಾಜಕೀಯವಾಗಿ ಜಿಲ್ಲೆಯೂ ಸಾಮಾಜಿಕವಾಗಿ, ಆರ್ಥಿಕವಾಗಿ ಕುಸಿತ ಕಂಡಿದೆ. ಜಿಲೆಲಯಲ್ಲಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಸಚಿವ ನಾರಾಯಣ ಗೌಡ ಮಾತನಾಡಿ ಮುಂದಿನ ದಿನಗಳಲ್ಲಿ ಜೆಡಿಎಸ್-ಕಾಂಗ್ರೆಸ್ ತೊರೆದು ಅನೇಕರು ಬಿಜೆಪಿ ಸೇರಲಿದ್ದಾರೆ. ಇತರೆ ಪಕ್ಷಗಳ ಭದ್ರೆಕೋಟೆಯನ್ನ ಒಡೆದು ಹಾಕುವ ಶಕ್ತಿ ಬಿಜೆಪಿಗಿದೆ ಮತ್ತು 2023ರ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆದ್ದು ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.













