ಮಂಡ್ಯ (Mandya) : ಸುಮಲತಾ (Sumalatha) ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ. ಅದರ ಅಗತ್ಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumarswamy) ಹೇಳಿದ್ದಾರೆ.
ಇಂದು ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಟೀಕೆ ಪ್ರತಿ ಟೀಕೆಗಳು ಇರುತ್ತವೆ. ಸುಮಲತಾ ಅವರು ನಾವು ಪರಸ್ವರ ಟೀಕೆ ಟಿಪ್ಪಣಿ ಮಾಡಿಕೊಂಡಿದ್ದೇವೆ. ಅದು ಮುಗಿದ ಅಧ್ಯಾಯ. ಅದು ಸಂಬಂಧಗಳಿಗೆ ಧಕೆ ತರುವಂಥದ್ದು ಬೇಡ ಎಂದರು.

ಅಂಬರೀಶ್ (Ambareesh) ಅವರೂ ನಾವೆಲ್ಲ ಒಟ್ಟಾಗಿ ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಅವರು ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ವಿಧಿ ಆಟವೋ ಏನೋ ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಡಾ.ರಾಜಕುಮಾರ್ (Dr Rajkumar) ಅವರು, ಅಂಬರೀಶ್ (ambareesh) ಅವರು ನಿಧನರಾದರು. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಅವರ ಸ್ಮಾರಕಕ್ಕೆ ಸ್ಥಳ ನೀಡಿದ್ದು ನಾನೇ. ಆ ಮೇರುನಟನ ಸ್ಮಾರಕದ ಸಮೀಪದಲ್ಲಿಯೇ ಅಂಬರೀಶ್ ಅವರ ಸ್ಮಾರಕಕ್ಕೂ ಜಾಗ ಗುರುತಿಸಿ, ಗೌರವ ಕೊಟ್ಟೆ. ಇದೆಲ್ಲವನ್ನೂ ಆ ದೇವರೇ ನನ್ನಿಂದ ಮಾಡಿಸಿದ್ದಾನೆ ಎಂದು ನಂಬಿದ್ದೇನೆ. ವಿಷ್ಣುವರ್ಧನ್ ಅವರ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.
ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದೆ
ಮಂಡ್ಯ ಜಿಲ್ಲೆಯ ಜನರ ಜತೆ ಮೊದಲಿಂದಲೂ ನಾನು ಇದ್ದೇನೆ. 2019ರಲ್ಲಿ ಇಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕುಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ. ನನ್ನ ಜನ್ಮ ಭೂಮಿ ಹಾಸನ, ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ ಎಂದರು.
#karnataka #mandya #loksabhaelection #hdkumarswamy #sumlatha #jds #bjp