ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಅಧಿವೇಶನದಲ್ಲಿ ಪಾಲ್ಗೊಂಡಿರುವ ಸಮಯದಲ್ಲಿ ಜಾರಿ ನಿರ್ದೇಶನಾಯಲದಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಇನ್ನು ಈ ಕುರಿತು ಸಂಸತ್ನಲ್ಲಿ ಮಾತನಾಡಿದ ಖರ್ಗೆ ನನ್ನಗೆ ಈಡಿಯಿಂದ ಕರೆ ಬಂತು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಕರೆ ಬಂತು ನಾನು ಕಾನೂನನ್ನು ಪಾಲಿಸುತ್ತೇನೆ. ಆದರೆ, ಅಧಿವೇಶನ ನಡೆಯುವ ಸಮಯದಲ್ಲಿ ಹೇಗೆ ಭಾಗಿಯಾಗಲು ಸಾಧ್ಯ ನಾವು ಹೆದರುವವರಲ್ಲ ಹೋರಾಡುವವರು ಎಂದಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಗದ್ದಲ ಎಬ್ಬಿಸಿದ ಕಾಂಗ್ರೆಸ್ ಸದಸ್ಯರು ಕೇಂದ್ರ ಬಿಜೆಪಿ ಸರ್ಕಾರವು ಸರ್ಕಾರಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತತ್ತಿದೆ ಎಂದು ಆರೋಪಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಇತ್ತ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ನಡುವಿನ ಮಾತಿನ ಚಕಮಕಿಯೂ ಜೋರಾಗಿ ನಡೆಯುತಿತ್ತು.
