ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.


ಸಂಪುಟ ದರ್ಜೆ ಸ್ಥಾನಮಾನ ನೀಡಿ ಸುನೀಲ್ ಕನುಗೋಲು ಅವರನ್ನು ಸಿಎಂ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಿಸಲಾಗಿದೆ. ಈ ಕುರಿತ ನೇಮಕಾತಿ ಆದೇಶ ಪತ್ರವನ್ನು ಕೂಡ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಕನುಗೋಲು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅವರು ಬಿಜೆಪಿ ಸರ್ಕಾರದ ವಿರುದ್ಧ ನಿರೂಪಣೆಗಳನ್ನು ಹೊಂದಿಸಲು ಪಕ್ಷಕ್ಕೆ ಸಹಾಯ ಮಾಡಿದ್ದರು ಮತ್ತು ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮಹತ್ವದ ಮಾಹಿತಿಗಳನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.