ಭಾರತ ಕಂಡ ಶ್ರೇಷ್ಠ ಫುಟ್ಬಾಲ್(Indian football icon) ಆಟಗಾರ ಸುನೀಲ್ ಚೆಟ್ರಿ(Sunil Chhetri) ಅವರು ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿ ಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ. ಜೂನ್ 6 ರಂದು ಕುವೈತ್(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ.
ಚೆಟ್ರಿ ತಮ್ಮ ನಿವೃತ್ತಿಯನ್ನು ಘೋಷಿಸುತ್ತಿದ್ದಂತೆ, ಅನೇಕ ಭಾರತೀಯ ದಿಗ್ಗಜ ಕ್ರೀಡಾಪಟುಗಳು ಚೆಟ್ರಿಗೆ ಹಾರೈಸಿದ್ದಾರೆ ಜತೆಗೆ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಚೆಟ್ರಿ ಅವರ ಆಪ್ತ ಗೆಳೆಯ ಟೀಮ್ ಇಂಡಿಯಾದ ಕ್ರಿಕೆಟಿಗ ವಿರಾಟ್ ಕೊಹ್ಲಿ(virat kohli) ನಿಮ್ಮ ಬಗ್ಗೆ ಹೆಮ್ಮೆಯಿದೆ, ಮೈ ಬದ್ರರ್ ಎಂದು ಕಮೆಂಟ್ ಮಾಡಿದ್ದಾರೆ.1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು. ತನ್ನ 18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್ಬುಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ