ಸೆಪ್ಟೆಂಬರ್ 2021ರಲ್ಲಿ ನಡೆಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು (SSLC supplementary result) ಇಂದು (ಸೋಮವಾರ) ಬೆಳಿಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Education Minister BC Nagesh ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೆಪ್ಟಂಬರ್ 2021ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 11ರ ಬೆಳಿಗ್ಗೆ 10 ಗಂಟೆಗೆ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸೋದಾಗಿ ತಿಳಿಸಿದ್ದಾರೆ.
sslc ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ಪಡೆಯಬಹುದು. karresults.nic.in , kseeb.karresults.nic.in












