ಮಂಡ್ಯ : ಮಂಡ್ಯ ಶಾಸಕ ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅವರಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿ ಮಳವಳ್ಳಿ ಪಟ್ಟಣದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ನರೇಂದ್ರಸ್ವಾಮಿಯನ್ನು ಸಚಿವರನ್ನಾಗಿ ಮಾಡುವಂತೆ ಆಗ್ರಹಿಸಿ ಫ್ಲೆಕ್ಸ್ ಹಿಡಿದು ಬೆಂಬಲಿಗರು ಜೈಕಾರ ಕೂರಿದ್ದಾರೆ. ಪುರಸಭಾ ಮಾಜಿ ಅಧ್ಯಕ್ಷ ದೊಡ್ಡಯ್ಯ ನೇತೃತ್ವದಲ್ಲಿ ಸಚಿವ ಸ್ಥಾನಕ್ಕೆ ಬೆಂಬಲಿಗರು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ರವರೇ ನರೇಂದ್ರಸ್ವಾಮಿಗೆ ಮಂತ್ರಿಗಿರಿ ಕೊಡಿ ಎಂದು ಬೆಂಬಲಿಗರು ಕೂಗಿದ್ದಾರೆ.