ಭೂ ಕಬಳಿಕೆ ಪ್ರಕರಣ ಸೇರಿದಂತೆ ವಿವಿಧ ಮೊಕದ್ದಮೆಗಳನ್ನು ಎದುರಿಸುತ್ತಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಹಾಗು ಎ.ಎಸ್.ಬೋಪಣ್ಣ ರಿದ್ದ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಮಂಗಳವಾರ ಮುಂದೂಡಿದೆ.
ಕಳೆದ ಎರಡು ವರ್ಷಗಳಿಂದ ಅಜಂ ಖಾನ್ ಕಾರಾಗೃಹದಲ್ಲೇ ಇದ್ದಾರೆ ಅವರನ್ನು ಯಾಕೆ ಬಿಡುತ್ತಿಲ್ಲ ಒಂದು ಅಥವಾ ಎರಡು ಪ್ರಕರಣಗಳಾದರೆ ಸರಿ ಅವರ ವಿರುದ್ದ ಇರುವುದು ಒಟ್ಟು 89 ಪ್ರಕರಣಗಳು. ಒಂದು ಪ್ರಕರಣದಲ್ಲಿ ಜಾಮೀನು ದೊರೆತರು ಮತ್ತೊಂದರಲ್ಲಿ ಜಾಮೀನು ಸಿಗುವುದಿಲ್ಲ ಸರ್ಕಾರ ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಹೇಳಿದೆ.

ಅಜಂ ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅಜಂ ಖಾನ್ ಪ್ರಕರಣದಲ್ಲಿ ಆಳವಾದ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದಕ್ಕೆ ಮಧ್ಯಪ್ರವೇಶಿಸಿ ಮಾತನಾಡಿದ ಉತ್ತರ ಪ್ರದೇಶ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಎಸ್.ವಿ.ರಾಜು ಅಜಂ ಖಾನ್ ಪ್ರಕರಣದಲ್ಲಿ ಜನರಿಗೆ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ ಅವರ ವಿರುದ್ದ ದಾಖಲಾಗಿರುವ ಎಲ್ಲ ಪ್ರಕರಣಗಳಲ್ಲಿಯೂ ಸಹ ಉರುಳಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.






