ನವದೆಹಲಿ : ಕರ್ನಾಟಕದಲ್ಲಿ ಸ್ಮಾರ್ಟ್ ಮೀಟರ್ (Smart meter) ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಈ ಮೂಲಕ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ವಿನೋದ್ ಚಂದ್ರನ್ ಅವರಿದ್ದ ಪೀಠವು, ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣಗಳಿಲ್ಲ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕದಲ್ಲಿ ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಅವರು ಖಾಸಗಿ ದೂರು ಸಲ್ಲಿಸಿದ್ದರು. ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ತಾಂತ್ರಿಕ ನಿರ್ದೇಶಕ ಎಚ್.ಜೆ. ರಮೇಶ್ ವಿರುದ್ಧ ಈ ದೂರು ದಾಖಲಾಗಿತ್ತು.

ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರಿಂದ ಪ್ರಾಥಮಿಕ ತನಿಖಾ ವರದಿ ತರಿಸಿಕೊಳ್ಳುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಿಜೆಪಿ ನಾಯಕರ ದೂರನ್ನು ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಮುಖಂಡರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಕೂಡ ಅರ್ಜಿಯನ್ನು ತಳ್ಳಿಹಾಕುವ ಮೂಲಕ ಸಚಿವರಿಗೆ ದೊಡ್ಡ ರಿಲೀಫ್ ನೀಡಿದೆ.
ಮೊಬೈಲ್ ಗ್ರಾಹಕರಿಗೆ ಸಿಹಿಸುದ್ದಿ: 30 ದಿನಗಳ ವ್ಯಾಲಿಡಿಟಿ ಕರೆ, SMS ಪ್ಲಾನ್‌ಗಳಿಗೆ TRAI ಹೊಸ ನಿಯಮ | TRAI
ರೇಣುಕಾಸ್ವಾಮಿ ಕೊಲೆ ಕೇಸ್ : ಇನ್‌ಕ್ಯಾಮೆರಾ ಪ್ರೊಸೀಡಿಂಗ್ಸ್ ಮೂಲಕ ಮಾಫಿ ಸಾಕ್ಷಿ ಪ್ರದೂಷ್ ವಿಚಾರಣೆ ಆರಂಭ | Pradoosh
ಐತಿಹಾಸಿಕ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ `ಗವಿಸಿದ್ದೇಶ್ವರ ಶ್ರೀಗಳಿಗೆ’ ಅಧಿಕೃತ ಆಹ್ವಾನ | Mysuru Dasara






