ಯೋಗೇಶಗೌಡ ಗೌಡ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ತನಿಖೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 2019ರಲ್ಲಿ ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿತ್ತು. ನಂತರದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತ್ತು.

ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದ ಸಿಬಿಐ ತನಿಖೆಯ ಸಿಂಧುತ್ವವನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್ ಹಾಗೂ ಪಿ.ಎಸ್.ನರಸಿಂಹ ಅವರಿದ್ದ ಪೀಠ ಅವರ ಅರ್ಜಿಯನ್ನು ತಿರಸ್ಕರಿಸಿದೆ.