1987 ರ ರಸ್ತೆ ಜಗಳ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪಟಿಯಾಲ ನಿವಾಸಿ ಗುರ್ನಾಮ್ಸಿಂಗ್ ಸಾವನ್ನಪ್ಪಿದ 1988ರ ರಸ್ತೆ ಜಗಳ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ದೋಷ ಮುಕ್ತಗೊಳಿಸಿದ ಮೇ 2018ರ ಆದೇಶವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಈ ಹಿಂದೆ ಸಿಧುಗೆ ₹1000 ದಂಡ ವಿಧಿಸಿ ಬಿಡುಗಡೆಗೊಳಿಸಲಾಗಿತ್ತು . ಇದೀಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಸಿಧುಗೆ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಮೇ 15, 2018 ರಂದು ಸುಪ್ರೀಂ ಕೋರ್ಟ್ ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶವನ್ನು ರದ್ದು ಗೊಳಿಸಿತು, ಆದರೆ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರನ್ನು ತಪ್ಪಿತಸ್ಥರೆಂದು ಹೇಳಿತು. ಪಂಜಾಬಿನ ಪಟಿಯಾಲ ಪೊಲೀಸರಿಂದ ಬಂಧನ ಸಾಧ್ಯತೆ ಇದೆ. ನಾಲ್ಕು ವರ್ಷಗಳ ನಂತರ ಸಿದ್ದುಗೆ ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್.