ನವದೆಹಲಿ: ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಚುನಾವಣೆ ಗೆದ್ದ ಆರೋಪ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಸುಪ್ರೀಂ ಕೋರ್ಟ್( Supreme Court) ನೋಟಿಸ್ ನೀಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಈ ರೀತಿ ಆಮಿಷವೊಡ್ಡಿ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ ಶಂಕರ್ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಿದ್ದರು.

ಈ ಮೊದಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿದ್ದ ಕೆ.ಎಂ. ಶಂಕರ್ ಗ್ಯಾರಂಟಿ ಕಾರ್ಡಿನ ಮೇಲೆ ಸಿದ್ದರಾಮಯ್ಯ ಅವರೇ ಸಹಿ ಮಾಡಿದ್ದಾರೆ. ಮತದಾರರಿಗೆ ಆಮಿಷವೊಡ್ಡಿ ಮತ ಹಾಕಿಸಿಕೊಳ್ಳುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಅಕ್ರಮವಾಗುತ್ತದೆ ಎಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ಗೆ ಕೆ.ಎಂ ಶಂಕರ್ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.












