ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂಆರ್ ಶಾ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಿಮಾಚಲದಿಂದ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ರವಾನಿಸಲಾಗಿದೆ.
ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಹಿಮಾಚಲ ಪ್ರದೇಶದಲ್ಲಿ ಜಸ್ಟಿಸ್ ಶಾ ಅವರು ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ದೆಹಲಿಗೆ ಧಾವಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

64 ವರ್ಷ ವಯಸ್ಸಿನ ನ್ಯಾಯಮೂರ್ತಿ ಶಾ ಅವರು ಹಿಂದೆ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾದರು. ನ್ಯಾಯಮೂರ್ತಿ ಎಂಆರ್ ಶಾ ಅವರು ಮೇ 15, 2023 ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಎಂಆರ್ ಶಾ ಅವರು ಪ್ರಧಾನಿ ಮೋದಿಯವರನ್ನು ‘ಜನಪ್ರಿಯ, ಪ್ರೀತಿಪಾತ್ರ, ಮತ್ತು ದೂರದೃಷ್ಟಿಯ ನಾಯಕ ಎಂದು ಬಣ್ಣಿಸಿದ್ದರು.