ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ಮಧ್ಯಂತರ ಜಾಮೀನು ನೀಡಲ್ಲ” ಎಂದು ತಿಳಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಜೊತೆಗೆ ಬಂಧನ ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಿಚಾರದಲ್ಲಿ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಬಳಿಕ ಈ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಲಾಗುವುದು ಎಂದು ಕೋರ್ಟ್ ತಿಳಿಸಿದೆ
We are not granting any interim bail: SC on CM Arvind Kejriwal's plea against his arrest by CBI in excise policy scam case
— Press Trust of India (@PTI_News) August 14, 2024
ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ದಿ ರೋಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20ರವರೆಗೆ ವಿಸ್ತರಿಸಿದೆ.ಆಗಸ್ಟ್ 5ರಂದು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.