• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಾಹನಗಳಲ್ಲಿ ಸಿಸಿಟಿವಿ | ಪಿಐಎಲ್‌ ನಿರಾಕರಿಸಿದ ಸುಪ್ರೀಂ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
July 29, 2023
in ದೇಶ
0
ಸುಪ್ರೀಂ ಕೋರ್ಟ್‌
Share on WhatsAppShare on FacebookShare on Telegram

ದೇಶಾದ್ಯಂತ ಎಲ್ಲ ವಾಹನಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆಗೆ ಅಗತ್ಯ ಮಾರ್ಗಸೂಚಿಗಳ ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಶುಕ್ರವಾರ (ಜು.28) ತಿರಸ್ಕರಿಸಿದೆ.

ADVERTISEMENT

ಸಾರ್ವಜನಿಕ ವಾಹನಗಳಲ್ಲಿ ಬಾಡಿ ಕ್ಯಾಮರಾಗಳು ಮತ್ತು ಡ್ಯಾಶ್ ಕ್ಯಾಮರಾಗಳನ್ನು ಅಳವಡಿಸಲು ಅನುವು ಮಾಡುವ ಮೋಟಾರ್ ವೆಹಿಕಲ್ ಕಾಯಿದೆಯ ಸೆಕ್ಷನ್ 136-ಎ ಜಾರಿಗೊಳಿಸುವ ಬಗ್ಗೆ ಪಿಐಎಲ್ ಪ್ರಸ್ತಾಪಿಸಿತ್ತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ದ್ವಿಸದಸ್ಯ ಪೀಠ ಅರ್ಜಿ ಪುರಸ್ಕರಿಸಲು ಹಿಂಜರಿಕೆ ವ್ಯಕ್ತಪಡಿಸಿತು.

“ಸಂಚಾರ ನಿಯಂತ್ರಣ, ಎಲ್ಲ ಕ್ಯಾಮರಾಗಳನ್ನು ಎಲ್ಲಿ ಹಾಕಬೇಕು ಎಂದು ನ್ಯಾಯಾಲಯ ಮೇಲ್ವಿಚಾರಣೆ ನಡೆಸಬೇಕೆಂದು ನೀವು ಬಯಸುತ್ತೀರಾ? ಆದರೆ ಈ ವಿಚಾರವನ್ನು ನ್ಯಾಯಾಲಯಕ್ಕಿಂತ ಕಾರ್ಯಾಂಗ ಗಮನಹರಿಸುತ್ತದೆ” ಎಂದು ನ್ಯಾಯಮೂರ್ತಿ ಕೌಲ್ ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್ ಪೀಠದ ನಿರಾಕರಣೆ ಹಿನ್ನೆಲೆ ಅರ್ಜಿದಾರರ ಪರ ವಕೀಲ ಅನಂದೋ ಮುಖರ್ಜಿ ಅರ್ಜಿಯನ್ನು ಹಿಂಪಡೆದರು.

ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಕಾರ್ಯಕರ್ತರೊಬ್ಬರು ಸಂವಿಧಾನದ 23ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ಸಂಚಾರ ಹಾಗೂ ರಸ್ತೆ ಅಪಘಾತಗಳಲ್ಲಿ ಚಾಲಕ ಹಾಗೂ ಪ್ರಯಾಣಿಕರಿಬ್ಬರನ್ನೂ ರಕ್ಷಿಸಲು ಸುರಕ್ಷಾ ಕ್ರಮಗಳ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿತ್ತು.

ಮೋಟಾರ್ ವೆಹಿಕಲ್ ಕಾಯಿದೆಯಡಿ ಎಲ್ಲ ವಾಹನಗಳಲ್ಲಿ ಡ್ಯಾಶ್ ಕ್ಯಾಮರಾಗಳು ಮತ್ತು ರಿಯರ್ ವ್ಯೂ ಕ್ಯಾಮರಾಗಳನ್ನು ಅಳವಡಿಸಲು ಮಾರ್ಗಸೂಚಿಗಳನ್ನು ರಚಿಸಲು ಭಾರತದ ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ರಸ್ತೆ ಅಪಘಾತ, ಸಂಚಾರ ಸುರಕ್ಷತೆಯಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಬಗ್ಗೆ ಮೋಟಾರ್ ವೆಹಿಕಲ್ ಕಾಯಿದೆ ಈಗಾಗಲೇ ಹಲವಾರು ನಿಬಂಧನೆಗಳು ಮತ್ತು ತಿದ್ದಪಡಿಗಳನ್ನು ಮಾಡಿದೆ.

ಈ ಸುದ್ದಿ ಓದಿದ್ದೀರಾ? ಗಣಿ ಗುತ್ತಿಗೆ ಸಂಸ್ಥೆಗಳ ಹಲವು ಸಮಸ್ಯೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸಿಎಂ ಸೂಚನೆ

ವಿಶೇಷವಾಗಿ ಮೋಟಾರ್ ಕಾಯಿದೆಯ 136 ಎ ರಸ್ತೆ ಸುರಕ್ಷತೆಯ ಬಗ್ಗೆ ವಿವಿಧ ವಿಧಾನಗಳನ್ನು ಪ್ರಸ್ತಾಪಿಸುತ್ತದೆ. 136 ಎ ವಿಧಿಯ 2ನೇ ಉಪ ವಿಭಾಗವು ರಸ್ತೆ ಸುರಕ್ಷತೆಯ ಬಗ್ಗೆ ಕೇಂದ್ರ ಸರ್ಕಾರ ವಿಧಿಸಿರುವ ನಾನಾ ನಿಯಮಗಳ ಬಗ್ಗೆ ಹೇಳುತ್ತದೆ. ಇದರಲ್ಲಿ ವಿವಿಧ ಬಗೆಯ ಸಿಸಿಟಿವಿ ಕ್ಯಾಮರಾ ಅಳವಡಿಕೆ ಹಾಗೂ ತಂತ್ರಜ್ಞಾನಗಳೂ ಸೇರಿವೆ.

ಮೋಟಾರ್ ಕಾಯಿದೆಯ 136 ಎ ಸೆಕ್ಷನ್ ಅನ್ನು ಜಾರಿಗೊಳಿಸುವ ವಿಷಯವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ಪೀಠ ಈಗಾಗಲೇ ಇತ್ಯರ್ಥಪಡಿಸಿದೆ ಎಂದು ನ್ಯಾಯಮೂರ್ತಿ ಕೌಲ್ ಉಲ್ಲೇಖಿಸಿದರು.

Tags: CCTV CameraMotor Vehicles Act 2019pilPublic Interest Litigationsupreme courtಪಿಐಎಲ್‌ಸಿಸಿಟಿವಿ ಕ್ಯಾಮರಾಸುಪ್ರೀಂ ಕೋರ್ಟ್‌
Previous Post

Breaking : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಔಟ್

Next Post

 KRS ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಅಚ್ಚರಿ ವ್ಯಕ್ತ ಪಡಿಸಿದ ಸ್ಥಳೀಯರು

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
 KRS ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಅಚ್ಚರಿ ವ್ಯಕ್ತ ಪಡಿಸಿದ ಸ್ಥಳೀಯರು

 KRS ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಅಚ್ಚರಿ ವ್ಯಕ್ತ ಪಡಿಸಿದ ಸ್ಥಳೀಯರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada