ಎಸಿಬಿ ವಿರುದ್ಧದ ವಿಚಾರಣೆಯನ್ನು 3 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಎಸಿಬಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಸಂದೇಶ್ ಅವರು, ತಮ್ಮನ್ನು ವರ್ಗಾವಣೆ ಮಾಡುವುದಾಗಿ ಪರೋಕ್ಷವಾಗಿ ಬೆದರಿಕೆ ಹಾಕಿರುವ ಬಗ್ಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿ ಸೀಮಂತ್ ಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ನ್ಯಾಯಾಧೀಶ ಸಂದೇಶ್ ಹಲವಾರು ಗಂಭೀರ ಆರೋಪ ಮಾಡಿದ್ದೂ ಅಲ್ಲದೇ ತಮ್ಮನ್ನು ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕಿದ ಎಡಿಜಿಪಿ ವಿರುದ್ಧ ಕಿಡಿಕಾರಿದ್ದರು.
ಈ ಹಿನ್ನೆಲೆಯಲ್ಲಿ ಎಸಿಬಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಮಣ, ಎಸಿಬಿ ವಿರುದ್ಧದ ವಿಚಾರಣೆಯನ್ನು ೩ ದಿನ ತಡೆ ನೀಡುವಂತೆ ಸೂಚಿಸಿದ್ದಾರೆ.