ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಾಜಿಯಂ ಶಿಫಾರಸ್ಸು ಮಾಡಿದೆ.
ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿ ಪಿಬಿ ವರ್ಲೆ ಅವರನ್ನು ಶಿಫಾರಸು ಮಾಡಲಾಗಿದೆ. ಇವರು ಪ್ರಸ್ತುತ ಮುಂಬೈನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಒರಿಶಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ವಂತ್ ಸಿಂಗ್, ಮತ್ತು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಎ.ಎಂ.ಮ್ಯಾಗ್ರೆ ಅವರನ್ನು ನೇಮಿಸುವಂತೆ ಶಿಫಾರಸ್ಸು ಮಾಡಲಾಗಿದೆ.







