• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶದಲ್ಲಿ ಲಾಕ್‌ಡೌನ್‌ ವಿಧಿಸುವ ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

by
April 22, 2021
in ದೇಶ
0
ಉತ್ತರ ಪ್ರದೇಶದಲ್ಲಿ ಲಾಕ್‌ಡೌನ್‌ ವಿಧಿಸುವ ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ
Share on WhatsAppShare on FacebookShare on Telegram

ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ವರದಿಯಾಗುತ್ತಿರುವ ಉತ್ತರ ಪ್ರದೇಶದ ಐದು ಜಿಲ್ಲೆಗಳಾದ ಪ್ರಯಾಗ್‌ರಾಜ್, ಲಕ್ನೋ, ವಾರಣಾಸಿ, ಕಾನ್ಪುರ ನಗರ ಮತ್ತು ಗೋರಖ್‌ಪುರ ಜಿಲ್ಲೆಗಳಲ್ಲಿ ಏಪ್ರಿಲ್ 26 ರವರೆಗೆ ಒಂದು ವಾರದ ಲಾಕ್‌ಡೌನ್ ಮಾಡಲು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ.

ADVERTISEMENT

ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಜಾರಿಗೆ ತರಲು ನಿರಾಕರಿಸಿದ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.‌ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತೆಗೆದುಕೊಂಡ ವಿವಿಧ ಕ್ರಮಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ಒಂದು ವಾರದೊಳಗೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ.

ವಿಚಾರಣೆಯ ಸಮಯದಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಆದೇಶವು ಅಪಾರ ಆಡಳಿತಾತ್ಮಕ ತೊಂದರೆಗಳನ್ನು ಸೃಷ್ಟಿಸುತ್ತದೆ ಮತ್ತು ನ್ಯಾಯಾಂಗ ಆದೇಶದ ಮೂಲಕ ಲಾಕ್‌ಡೌನ್‌ ಹಾಕುವುದು ಸರಿಯಾದ ವಿಧಾನವಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ನ್ಯಾಯಪೀಠಕ್ಕೆ ತಿಳಿಸಿದೆ.

ಉತ್ತರ ಪ್ರದೇಶ ಲಾಕ್‌ಡೌನ್ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಸಹಾಯ ಮಾಡಲು ಹಿರಿಯ ವಕೀಲ ಪಿ ಎಸ್ ನರಸಿಂಹ ಅವರನ್ನು ಅಮಿಕಸ್ ಕ್ಯೂರಿಯಾಗಿ ಸುಪ್ರೀಂ ಕೋರ್ಟ್ ನೇಮಕ ಮಾಡಿದೆ.

ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಅಲಹಾಬಾದ್‌ ಹೈಕೋರ್ಟ್‌ ಲಾಕ್‌ಡೌನ್‌ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಆರ್ಥಿಕತೆಯ ರಾಗವನ್ನು ಸರ್ಕಾರ ಹಾಡುತ್ತಿದೆ. ಆದರೆ, ಔಷಧ ಮತ್ತು ಆಮ್ಲಜನಕ ಬೇಕಿರುವ ವ್ಯಕ್ತಿಯ ಬಳಿ ಆಹಾರ ಕೊಂಡು ಹೋಗಿ ಏನೂ ಪ್ರಯೋಜನವಿಲ್ಲ. ಮೆಡಿಕಲ್‌ಗಳಲ್ಲಿ ಜೀವ ಉಳಿಸುವ ಔಷಧಿಗಳೇ ಇಲ್ಲದೆ ಕಿರಾಣಿ ಅಂಗಡಿಯಲ್ಲಿ ಆಹಾರ ವಸ್ತುಗಳು ಹಾಗೂ ಕಾರು ಬೈಕುಗಳನ್ನು ಉತ್ಪಾದಿಸುವ ಕೈಗಾರಿಕೆಗಳಿದ್ದರೆ ಏನೂ ಪ್ರಯೋಜನವಿಲ್ಲ, ಕೋವಿಡ್‌ ಎರಡನೆಯ ಅಲೆಯ ಬಗ್ಗೆ ಗೊತ್ತಿದ್ದರೂ, ಸರ್ಕಾರ ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದು ನಾಚಿಕೆಗೇಡು ಎಂದು ಕೋರ್ಟ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಆದರೆ ಉತ್ತರಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅನುಸರಿಸಲು ನಿರಾಕರಿಸಿತು. ಜೀವ ಉಳಿಸುವುದರ ಜೊತೆಗೆ, ಜೀವನೋಪಾಯದ ಬಗ್ಗೆಯೂ ಯೋಚಿಸಬೇಕಾಗಿದೆ. ಸರ್ಕಾರವು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲಿದೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸಹಗಲ್ ಸೋಮವಾರ ಹೇಳಿದ್ದರು.

Previous Post

ʼನಿಗದಿತ ಧರ್ಮದʼ ಕಾಳಜಿ ವಹಿಸುವ ದೇಶಗಳ ಪಟ್ಟಿಯಲ್ಲಿ ಭಾರತ – USCIRF ವರದಿ

Next Post

ಕರೋನಾ ಸುನಾಮಿ: ಪದೇಪದೆ ಎಡವಿದ ಆಡಳಿತಕ್ಕೆ ಉಳಿದ ದಾರಿ ಯಾವುದು?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕರೋನಾ ಸುನಾಮಿ: ಪದೇಪದೆ ಎಡವಿದ ಆಡಳಿತಕ್ಕೆ ಉಳಿದ ದಾರಿ ಯಾವುದು?

ಕರೋನಾ ಸುನಾಮಿ: ಪದೇಪದೆ ಎಡವಿದ ಆಡಳಿತಕ್ಕೆ ಉಳಿದ ದಾರಿ ಯಾವುದು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada